ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: 189 ಅಭ್ಯರ್ಥಿಗಳು ಮೊದಲ ಪಟ್ಟಿಯಲ್ಲಿ
ನವದೆಹಲಿ: ರಾಜ್ಯದ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಮೂರು ದಿನಕ್ಕೂ ಹೆಚ್ಚು ಕಾಲ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ ಮಂಗಳವಾರ ರಾತ್ರಿ ಅಂದರೆ ಈಗ ಬಿಜೆಪಿ ವರಿಷ್ಠರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ.
ಇದು 189 ಅಭ್ಯರ್ಥಿಗಳ ಮೊದಲ ಪಟ್ಟಿಯಾಗಿದ್ದು, ಇದರಲ್ಲಿ 52 ಹೊಸ ಮುಖಗಳಿವೆ. ಅಭ್ಯರ್ಥಿಗಳ ಪಟ್ಟಿಯಲ್ಲಿ 8 ಮಹಿಳೆಯರಿದ್ದಾರೆ. ಒಬಿಸಿ 32, ಎಸ್‌ಸಿ 30, ಎಸ್ ಟಿ 16 ಅಭ್ಯರ್ಥಿಗಳು ಪಟ್ಟಿಯಲ್ಲಿದ್ದಾರೆ.
ಅಳೆದು ತೂಗಿ ಲೆಕ್ಕಾಚಾರ ಹಾಕಿ ಕೊನೆಗೂ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ವರಿಷ್ಠರು ಪ್ರಕಟಿಸಿದ್ದಾರೆ. 224 ಸ್ಥಾನಗಳ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯ ಬಳಿಕ, ಈ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಇದಕ್ಕೂ ಮುನ್ನ, ಸೋಮವಾರ ಬೆಳಗ್ಗೆ ನವದೆಹಲಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಯಡಿಯೂರಪ್ಪ, “ರಾಜ್ಯದಲ್ಲಿ ಮೇ10ರಂದು ನಡೆಯಲಿರುವ ಕರ್ನಾಟಕ ಅಸೆಂಬ್ಲಿ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. 170ರಿಂದ 180ರ ತನಕ ಅಭ್ಯರ್ಥಿಗಳ ಹೆಸರು ಈ ಪಟ್ಟಿಯಲ್ಲಿ ಇರಲಿದ್ದು, ಇಂದು ಸಂಜೆ ಬಿಡುಗಡೆ ಆಗಲಿದೆ” ಎಂದು ಹೇಳಿದ್ದರು.
ರಾಷ್ಟ್ರ ರಾಜಧಾನಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಭಾನುವಾರ ಸಂಜೆ, ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಿತು. ಪ್ರಧಾನಿ ಮೋದಿ ಜತೆಗೆ ಕೇಂದ್ರ ಸಚಿವರಾದ ಅಮಿತ್ ಶಾ, ಪ್ರಲ್ಹಾದ್ ಜೋಶಿ, ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸಭೆಯಲ್ಲಿ ಪಾಲ್ಗೊಂಡಿದ್ದರು.
ಕರ್ನಾಟಕ ಸಿಎಂ ಬೊಮ್ಮಾಯಿ ಅವರೊಂದಿಗೆ ಇಂದು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಭಾಗವಹಿಸಲು ರಾಷ್ಟ್ರ ರಾಜಧಾನಿಗೆ ತೆರಳುವ ಮುನ್ನ ಯಡಿಯೂರಪ್ಪ ಅವರು, ಪಕ್ಷವು 224 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಅಂತಿಮಗೊಳಿಸಲಿದೆ ಎಂದು ಹೇಳಿದ್ದರು.
ಬಿಜೆಪಿ ಸಿಇಸಿ ಸಭೆ, ನಾವು ಸಾಧ್ಯವಾದಷ್ಟು ಬೇಗ ಎಲ್ಲ ಸ್ಥಾನಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತೇವೆ. ಅದಕ್ಕಾಗಿಯೇ ನಾನು ಹೋಗುತ್ತಿದ್ದೇನೆ ಎಂದು ಯಡಿಯೂರಪ್ಪ ವಿಮಾನ ಏರುವ ಮುನ್ನ ಹೇಳಿದರು. ಅದೇ ರೀತಿ, ಬಿಜೆಪಿ ಸಂಪೂರ್ಣ ಬಹುಮತ ಪಡೆಯಲಿದ್ದು, ನಾವು ಶೇ 100 ರಷ್ಟು ಸರ್ಕಾರ ರಚಿಸಲಿದ್ದೇವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw