ಬಿಜೆಪಿಗೆ ಸಾಮೂಹಿಕ ರಾಜೀನಾಮೆ: ವಿಶ್ವಕರ್ಮ ಸಮುದಾಯ ಎಚ್ಚರಿಕೆ
ಬೆಂಗಳೂರು: ಹಿಂದುಳಿದ ವರ್ಗಗಳ ನಾಯಕ, ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಅವರಿಗೆ ಬಿಜೆಪಿ ಕೊಟ್ಟಿರುವ ಭರವಸೆಯಂತೆ ಸಚಿವ ಸ್ಥಾನ ನೀಡದೆ ಕಡೆಗಣಿಸಿದರೆ ಪಕ್ಷಕ್ಕೆ ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ. ನಂಜುಂಡಿ ಅವರಿಂದಲೂ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡಿಸುತ್ತೇವೆ ಎಂದು ವಿಶ್ವಕರ್ಮ ಸಮುದಾಯ ಎಚ್ಚರಿಕೆ ನೀಡಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ವಿಶ್ವಕರ್ಮ ಮಹಾಸಭಾ ರಾಜ್ಯ ಯುವ ಘಟಕದ ಅಧ್ಯಕ್ಷ ಶ್ರೀನಿವಾಸ ಮಳವಳ್ಳಿ ಸುದ್ದಿಗಾರರ ಜತೆ ಮಾತನಾಡಿದರು.
ನಂಜುಂಡಿ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಪಕ್ಷದ ವರಿಷ್ಠರೊಂದಿಗೆ ಮಾತನಾಡುವೆ ಎಂದು ಸಿಎಂ ಭರವಸೆ ನೀಡಿದ್ದಾರೆ. ಸಮುದಾಯದ ಮುಖಂಡರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಬೇಕೆಂದಿದ್ದೇವೆ. ಪಕ್ಷದ ರಾಜ್ಯ ಪದಾಧಿಕಾರಿಗಳಿಗೂ ಮನವಿ ಸಲ್ಲಿಸುತ್ತೇವೆ. ಮುಂದಿನ ದಿನಗಳಲ್ಲಿ ಸಮುದಾಯದ 20,000 ಜನರ ಸಮಾವೇಶ ನಡೆಸಿ ಕೆ.ಪಿ.ನಂಜುಂಡಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಲಾಗುವುದು ಎಂದು ವಿವರಿಸಿದರು.
ಇಷ್ಟಾಗಿಯೂ ನಿರ್ಲಕ್ಷಿಸಿದರೆ ಸಮುದಾಯಕ್ಕೆ ಪ್ರಾತಿನಿಧ್ಯ, ಸಾಮಾಜಿಕ ನ್ಯಾಯ ನೀಡದ ಪಕ್ಷಕ್ಕೂ ರಾಜೀನಾಮೆ ನೀಡುತ್ತೇವೆ. ಸಮುದಾಯದ ಮುಖಂಡರು ಮಾತ್ರವಲ್ಲ, ಪಕ್ಷದ ವಿವಿಧ ಹುದ್ದೆಗಳಲ್ಲಿ ಇರುವವರೂ ಭಾಗವಹಿಸಿದ್ದೇವೆ. ಕೆ.ಪಿ.ನಂಜುಂಡಿ ಅವರನ್ನು ಸಚಿವರನ್ನಾಗಿ ಮಾಡದಿದ್ದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕಪಾಠ ಕಲಿಸುತ್ತೇವೆ ಎಂದು ವಿಶ್ವಕರ್ಮ ಸಮುದಾಯದ ಮುಖಂಡರು ಎಚ್ಚರಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಆಧಾರ್ ಪೌರತ್ವದ ಪುರಾವೆಯಲ್ಲ: ಸಂಸತ್ ನಲ್ಲಿ ಕೇಂದ್ರ ಸ್ಪಷ್ಟನೆ
ಬೈಕ್ ನಲ್ಲಿ ಗಾಂಜಾ ಮಾರಾಟ: ಆರೋಪಿಗಳ ಬಂಧನ
ವಿಶ್ವದ ಎತ್ತರದ ರಾಮಾನುಜಾಚಾರ್ಯರ ಪ್ರತಿಮೆ; ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ
ಡ್ರಿಂಕ್ಸ್ ಮಾಡಲು ಪತಿಯನ್ನು ಕರೆದುಕೊಂಡು ಹೋಗುತ್ತಿದ್ದ ಬಾವನ ಕೊಲೆ
ಮತ್ತೊಂದು ವಿಮಾನ ದುರಂತ : ಪೈಲಟ್ ಸೇರಿ ಏಳು ಮಂದಿಯ ಸಾವು