ವಿಧಾನ ಪರಿಷತ್ ಚುನಾವಣಾ ಫಲಿತಾಂಶ: ಬಿಜೆಪಿ ಗೆಲುವು ಸಾಧಿಸಿದ ಕ್ಷೇತ್ರಗಳು
ಬೆಂಗಳೂರು: ಇಂದು ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿಯ ಜಿದ್ದಾಜಿದ್ದಿನ ಹೋರಾಟ ನಡೆದಿದೆ. ಮುಂದಿನ ವಿಧಾನ ಸಭಾ ಚುನಾವಣೆಗೆ ಈ ರಿಸಲ್ಟ್ ಮಾರ್ಗಸೂಚಿ ಎಂಬಂತೆಯೇ ಚರ್ಚೆಯಾಗಿತ್ತು. ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳು ಈ ಬಾರಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಕೊಡಗು: ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ ವಿರುದ್ಧ ಸುಜಾ ಕುಶಾಲಪ್ಪ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬೆಂಗಳೂರು ನಗರ: ಬೆಂಗಳೂರು ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋಪಿನಾಥ್ ಅವರು ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಳ್ಳಾರಿ: ಬಳ್ಳಾರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೈ.ಎಂ ಸತೀಶ್ ಅವರು ಗೆಲುವು ಸಾಧಿಸಿದ್ದಾರೆ.
ಚಿಕ್ಕಮಗಳೂರು: ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಗೆಲುವು ಸಾಧಿಸಿದ್ದಾರೆ. ಆದರೆ ಈ ಗೆಲುವಿನ ವಿರುದ್ಧ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿ, ದೂರು ನೀಡಲು ಸಜ್ಜಾಗಿದೆ.
ಶಿವಮೊಗ್ಗ: ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಗೆಲುವು ಸಾಧಿಸಿದ್ದಾರೆ.
ಚಿತ್ರದುರ್ಗ: ಚಿತ್ರದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಗೆಲುವು ಸಾಧಿಸಿದ್ದಾರೆ.
ಉತ್ತರ ಕನ್ನಡ: ಉತ್ತರ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಸಾಧಿಸಿದ್ದಾರೆ.
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದಾರೆ.
ಕಲಬುರಗಿ: ಕಲಬುರ್ಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ್ ಗೆಲುವು ಸಾಧಿಸಿದ್ದಾರೆ.
ಧಾರವಾಡ: ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಎರಡನೇ ಪ್ರಾಶಸ್ತ್ಯದಲ್ಲಿ ಗೆಲುವು ಸಾಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ವಿಧಾನ ಪರಿಷತ್ ದ್ವಿಸದಸ್ಯತ್ವ ಚುನಾವಣೆ: ಗೆಲುವು ಸಾಧಿಸಿದ ಕೋಟ ಶ್ರೀನಿವಾಸ್ ಪೂಜಾರಿ, ಮಂಜುನಾಥ್ ಭಂಡಾರಿ
ಕುದಿಯುತ್ತಿದ್ದ ನೀರಿಗೆ ಬಿದ್ದು 2 ವರ್ಷದ ಮಗುವಿನ ದಾರುಣ ಸಾವು!
ಡಾನ್ಸ್ ಬಾರ್ ನ ರಹಸ್ಯ ಕೋಣೆಯಲ್ಲಿ ಬಚ್ಚಿಡಲಾಗಿದ್ದ 17 ಯುವತಿಯರ ರಕ್ಷಣೆ!
ಬೆಂಗಳೂರು ನಗರ: ಕೆ.ಜಿ.ಎಫ್. ಬಾಬುಗೆ ಸೋಲು, ಬಿಜೆಪಿ ಅಭ್ಯರ್ಥಿ ಗೋಪಿನಾಥ್ ಗೆಲುವು
ಹಾಸನ: ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭರ್ಜರಿ ಗೆಲುವು
ಬೀದರ್: ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಗೆ ಗೆಲುವು
ವಿಧಾನ ಪರಿಷತ್ ಚುನಾವಣೆ: ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು | ಎ.ಮಂಜು ಪುತ್ರಗೆ ಸೋಲು
ಗೋವುಗಳ ರಕ್ಷಣೆಗೆ ತಲ್ವಾರ್ ಖರೀದಿಸಿ: ಸಾಧ್ವಿ ಸರಸ್ವತಿ ಕರೆ
ಉಗುಳಿದ್ದನ್ನು ನೆಕ್ಕುವಂತೆ ದಲಿತ ವ್ಯಕ್ತಿಗಳ ಮೇಲೆ ದೌರ್ಜನ್ಯ: ಓರ್ವ ಅರೆಸ್ಟ್