ಚುನಾವಣೆ ಹತ್ತಿರ ಬರುತ್ತಿದ್ದಂತೆ 'ಏಕರೂಪ ನಾಗರಿಕ ಸಂಹಿತೆ' ಬಾಣ ಬಿಟ್ಟಿತೇ ಬಿಜೆಪಿ..?: ಟಿಎಂಸಿ ಸಂಸದ ಕೇಂದ್ರದ ವಿರುದ್ಧ ಕಿಡಿಕಾರಿದ್ಯಾಕೆ..? - Mahanayaka

ಚುನಾವಣೆ ಹತ್ತಿರ ಬರುತ್ತಿದ್ದಂತೆ ‘ಏಕರೂಪ ನಾಗರಿಕ ಸಂಹಿತೆ’ ಬಾಣ ಬಿಟ್ಟಿತೇ ಬಿಜೆಪಿ..?: ಟಿಎಂಸಿ ಸಂಸದ ಕೇಂದ್ರದ ವಿರುದ್ಧ ಕಿಡಿಕಾರಿದ್ಯಾಕೆ..?

01/07/2023

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ಪ್ರತಿಪಕ್ಷಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ಆರೋಪಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿರುವಾಗ ಬಿಜೆಪಿ ಏಕರೂಪ ನಾಗರಿಕ ಸಂಹಿತೆ ಪ್ರಸ್ತಾಪಿಸಿದೆ ಎಂದು ಸಿನ್ಹಾ ಹೇಳಿದ್ದಾರೆ.

ಟಿಎಂಸಿ ಪಕ್ಷದ ಯುವ ಅಧ್ಯಕ್ಷೆ ಸಯೋನಿ ಘೋಷ್‌ರವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿ ಸತತ 12 ಗಂಟೆಗಳ ಕಾಲ ವಿಚಾರಣೆ ನಡೆಸಿರುವ ಕುರಿತು ಪ್ರತಿಕ್ರಿಯಿಸಿರುವ ಸಿನ್ಹಾ, 2024 ರಲ್ಲಿ ಅಧಿಕಾರದಿಂದ ಕೆಳಗಿಳಿಯುವ ಆತಂಕದಿಂದ ಬಿಜೆಪಿ ಪ್ರತಿಪಕ್ಷಗಳ ವಿರುದ್ಧ ಸೇಡು ತೀರಿಸಿಕೊಳ್ಳುವ ಹತಾಶ ಪ್ರಯತ್ನ ನಡೆಸುತ್ತಿದೆ ಎಂದು ಅರೋಪಿಸಿದ್ದಾರೆ.

ನಿರುದ್ಯೋಗ ಮತ್ತು ಹಣದುಬ್ಬರದಂತಹ ಪ್ರಮುಖ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಚುನಾವಣೆ ಸಮೀಪಿಸುತ್ತಿರುವ ಕಾರಣ ಬಿಜೆಪಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ವಿಷಯವನ್ನು ಪ್ರಸ್ತಾಪಿಸಿದೆ ಎಂದು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ