ಬಿಜೆಪಿಯ ಜನಸಂಕಲ್ಪ ಯಾತ್ರೆಗೆ ಮತ್ತೆ ಎದುರಾದ ವಿಘ್ನ: ಸಮಾವೇಶ ರದ್ದು!
ಕಲಬುರಗಿ: ಬಿಜೆಪಿ ಜನಸಂಕಲ್ಪ ಸಮಾವೇಶಗೆ ಮತ್ತೆ ವಿಘ್ನ ಎದುರಾಗಿದ್ದು, ವಿಧಾನ ಸಭೆ ಡಿಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ನಡೆಯಬೇಕಿದ್ದ ಜನಸಂಕಲ್ಪ ಸಮಾವೇಶ ರದ್ದಾಗಿದೆ.
ಆಳಂದ ಹಾಗೂ ಚಿತ್ತಾಪುರ ಪಟ್ಟಣಗಳಲ್ಲಿ ಇಂದು ಜನಸಂಕಲ್ಪ ಯಾತ್ರೆ ನಡೆಯಬೇಕಿತ್ತು. ಈಗಾಗಲೇ ವೇದಿಕೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ನಡೆಸಲಾಗಿತ್ತು. ಆದರೆ ಈ ನಡುವೆ ಆನಂದ್ ಮಾಮನಿ ಅವರ ನಿಧನದ ಸುದ್ದಿ ಬಂದಿದೆ.
ಬಿಜೆಪಿಯ ಜನಸಂಕಲ್ಪ ಯಾತ್ರೆಗೆ ನಿರಂತರವಾಗಿ ಅಡ್ಡ ಆತಂಕಗಳು ಎದುರಾಗಿದ್ದವು. ಈ ನಿಟ್ಟಿನಲ್ಲಿ ಜನಸಂಕಲ್ಪ ಯಾತ್ರೆಗೆ ಅಡ್ಡಿ ಬರಬಾರದು ಎಂದು ಪ್ರಾರ್ಥನೆ ಸಲ್ಲಿಸಿ ಪೂಜೆ ನಡೆಸಲಾಗಿದ್ದರೂ, ಮತ್ತೆ ಮತ್ತೆ ಜನಸಂಕಲ್ಪ ಯಾತ್ರೆ ರದ್ದಾಗುತ್ತಿರುವುದು ಬಿಜೆಪಿ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka