ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ಕಳ್ಳರ ಕೈಚಳಕ: 26 ಮಂದಿಯ ಹಣ, ಮೊಬೈಲ್ ಕಳವು - Mahanayaka

ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ಕಳ್ಳರ ಕೈಚಳಕ: 26 ಮಂದಿಯ ಹಣ, ಮೊಬೈಲ್ ಕಳವು

bjp
13/10/2022

ಕೊಪ್ಪಳ: ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ಕಳ್ಳರು ಕೈಚಳಕ ತೋರಿಸಿದ ಘಟನೆ  ನಡೆದಿದ್ದು, ಬಿಜೆಪಿ ಕಾರ್ಯಕರ್ತರ ಹಣ, ಮೊಬೈಲ್ ಗಳನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.


Provided by

ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ, ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಬೃಹತ್ ಸಭೆಯೊಳಗೆ ಕಾರ್ಯಕರ್ತರ ಜೊತೆಗೆ ಕಳ್ಳರೂ ಸೇರಿಕೊಂಡಿದ್ದು, ಕಾರ್ಯಕರ್ತರು ಸಮಾವೇಶದಲ್ಲಿ ನಿರತರಾಗಿರುವ ವೇಳೆ ಕಳ್ಳರು ಮೊಬೈಲ್, ಹಣ ಕಳವು ಮಾಡಿದ್ದಾರೆ ಎಂದು ಹೇಳಲಾಗಿದೆ.

ನೂರಾರು ಪೊಲೀಸರು ಸ್ಥಳದಲ್ಲಿದ್ದರೂ, ಕಳ್ಳರು ಸುಮಾರು 26 ಮಂದಿಯ ಹಣ, ಮೊಬೈಲ್ ಕಳವು ನಡೆಸಿದ್ದಾರೆ. ಪತ್ರಕರ್ತರು ಸೇರಿದಂತೆ ಹಲವರನ್ನು ದೋಷಲಾಗಿದ್ದು, ಈ ಸಂಬಂಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ 26 ಜನರು ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ