ಗುಂಪುಗೂಡಬಾರದು ಎನ್ನುತ್ತಲೇ ಬಿಜೆಪಿ ಜನಾಶೀರ್ವಾದ ಜಾತ್ರೆಯ ಬಗ್ಗೆ ಮೌನ ವಹಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕೊವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳು ಮತ್ತು ಮಾರುಕಟ್ಟೆಗಳಲ್ಲಿ ಜನರು ಗುಂಪು ಗೂಡಬಾರದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. ವರಮಹಾಲಕ್ಷ್ಮೀ ಹಬ್ಬಕ್ಕೆ ಶುಭಕೋರಿದ ಅವರು, ಕೊವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಕೊರೊನಾ ಪ್ರಕರಣಗಳ ಸಂಖ್ಯೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏರಿಕೆಯಾಗುತ್ತಿದೆ ಎನ್ನುವ ಆತಂಕದ ನಡುವೆಯೇ ಕೇರಳ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ಈ ನಡುವೆ ಸಿಎಂ ಬೊಮ್ಮಾಯಿ ಕೊವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಂಕಷ್ಟಕ್ಕೆ ಗುರಿಯಾಗಬೇಕಾಗುತ್ತದೆ ಎನ್ನುವ ಎಚ್ಚರಿಕೆ ಮಾತುಗಳನ್ನಾಗಿದ್ದಾರೆ.
ಒಂದೆಡೆ, ಬಿಜೆಪಿ ಸಚಿವರು ಜನಾಶೀರ್ವಾದ ಯಾತ್ರೆ ಎಂದು ಊರಿಡೀ ಜಾತ್ರೆಯನ್ನೇ ಮಾಡುತ್ತಿದ್ದಾರೆ. ಇದ್ಯಾವುದಕ್ಕೂ ನಿರ್ಬಂಧಗಳನ್ನು ಹಾಕದ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಯಾರಿಗೆ ನಿಯಮಗಳನ್ನು ಹೇಳುತ್ತಿದ್ದಾರೋ ತಿಳಿಯುತ್ತಿಲ್ಲ. ಜನರು ತಮ್ಮ ಹಬ್ಬ ಹರಿದಿನಗಳು, ಜಾತ್ರೆಗಳ ಸಂಭ್ರಮ ಪ್ರತಿಯೊಂದನ್ನು ಬದಿಗೊತ್ತಿ ಕೊರೊನಾ ನಿಯಂತ್ರಣಕ್ಕೆ ಸರ್ಕಾರದ ಜೊತೆಗೆ ಸಹಕರಿಸಿದ್ದಾರೆ. ಆದರೆ, ಮೂರನೇ ಅಲೆಯ ಭೀತಿಯ ನಡುವೆಯೇ ಬಿಜೆಪಿ ನಾಯಕರು ಜನಾಶೀರ್ವಾದ ಯಾತ್ರೆಯ ಹೆಸರಿನಲ್ಲಿ ಜಾತ್ರೆಯಂತೆ ಮೆರವಣಿಗೆ ನಡೆಸುತ್ತಿದ್ದಾರೆ. ಇದನ್ನು ಮೊದಲು ಸಿಎಂ ಪ್ರಶ್ನಿಸಲಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇನ್ನಷ್ಟು ಸುದ್ದಿಗಳು…
ಬದುಕಿದ್ದ ಯೋಧನ ಮನೆಗೆ ಹೋಗಿ ಸಾಂತ್ವನ ಹೇಳಿದ ಕೇಂದ್ರ ಸಚಿವ: ಜನಾಶೀರ್ವಾದ ಯಾತ್ರೆಯಲ್ಲಿ ಯಡವಟ್ಟು
ಓವೈಸಿಯನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸುವುದು ಉತ್ತಮ | ಸಚಿವೆ ಶೋಭಾ ಕರಂದ್ಲಾಜೆ
ದೇವರಾಜ ಅರಸರ ದುರಂತ ಅಂತ್ಯಕ್ಕೆ ಕಾಂಗ್ರೆಸ್ ಕಾರಣ | ರಘು ಆರ್.ಕೌಟಿಲ್ಯ ಆರೋಪ
ನರ್ಸ್ ನ ನಗ್ನ ಚಿತ್ರ ತೆಗೆದು ಲೈಂಗಿಕ ಕ್ರಿಯೆ ನಡೆಸಲು ಬ್ಲ್ಯಾಕ್ ಮೇಲ್ | ವೈದ್ಯನ ವಿರುದ್ಧ ದೂರು
ಕೊವಿಡ್ ಲಸಿಕೆ ಪಡೆದು 20 ದಿನಗಳಲ್ಲಿ ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷಿಸದಿರಿ!
ಗ್ಯಾಸ್ಟ್ರಿಕ್, ಹುಳಿತೇಗು ಕಿರಿಕಿರಿಯಿಂದ ಮುಕ್ತಿ ಪಡೆಯುವುದು ಹೇಗೆ?