ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡರೆ ತಪ್ಪೇನಿದೆ? | ಕುಮಾರಸ್ವಾಮಿ ಪ್ರಶ್ನೆ
20/11/2020
ಚನ್ನಪಟ್ಟಣ: ಬಿಜೆಪಿ-ಜೆಡಿಎಸ್ ಮೈತ್ರಿಯಾದರೆ ತಪ್ಪೇನಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದು, ಸ್ಥಳೀಯ ಚುನಾವಣೆಗೆ ಸಂಬಂಧಿಸಿದಂತೆ ಅವರು ಈ ಹೇಳಿಕೆ ನೀಡಿದ್ದು, ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯನ್ನು ಅವರು ಸಮರ್ಥಿಸಿಕೊಂಡರು.
ಮಂಡ್ಯದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಈ ವಿಚಾರವಾಗಿ ಅವರು “ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡರೆ ತಪ್ಪೇನಿದೆ?” ಎಂದು ಪ್ರಶ್ನಿಸಿದರು.
ಕೊಳ್ಳೆಗಾಲದ ಹನೂರಿನಲ್ಲಿ ಕಾಂಗ್ರೆಸ್ – ಬಿಜೆಪಿ ಮೈತ್ರಿಯಾಗಿವೆ. ನವಲಗುಂದದಲ್ಲಿ ಕಾಂಗ್ರೆಸ್ – ಬಿಜೆಪಿ ಮೈತ್ರಿಯಾಗಿವೆ. ಹಾಗಾಗಿ ಸ್ಥಳೀಯವಾಗಿ ಮೂರು ಪಕ್ಷದವರು ಹೊಂದಾಣಿಕೆಯಾಗುತ್ತಿದ್ದಾರೆ. ಅದು ಸ್ಥಳೀಯ ವಿಚಾರ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಸ್ಥಳೀಯ ಚುನಾವಣೆಗಳಲ್ಲಿ ಮೈತ್ರಿಯಾಗಿದೆ ಎಂದಾಕ್ಷಣ ಜೆಡಿಎಸ್ ಗೆ ಬಿಜೆಪಿ ಬಗ್ಗೆ ಮೃದುಧೋರಣೆ ಇದೆ ಎಂದು ತಿಳಿಯಬೇಡಿ ಎಂದು ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಹೇಳಿದರು.