ಬಿಜೆಪಿ – ಜೆಡಿಎಸ್ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ
ಬಾಗಲಕೋಟೆ: ಯಾರೇ ಪಕ್ಷ ಸೇರಿದರೂ ಸ್ವಾಗತ. ಆದರೆ, ಯಾವುದೇ ಷರತ್ತುಗಳು ಹಾಕುವಂತಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರಬೇಕು. ಇದಕ್ಕೆಲ್ಲಾ ಸಿದ್ಧವಾಗಿದ್ದರೆ ಮಾತ್ರ ಪಕ್ಷಕ್ಕೆ ಬರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಗೆ ಸೇರಲು ಬಿಜೆಪಿ ಮತ್ತು ಜೆಡಿಎಸ್ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರ ಹೆಸರು ಮಾತ್ರ ಹೇಳಲ್ಲ. ನಾವು ಯಾವಾಗಲೂ ಚುನಾವಣೆಗೆ ಸಿದ್ಧರಿದ್ದೇವೆ. ವಿಧಾನಸಭೆಗೂ ರೆಡಿ ಇದ್ದೇವೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೂ ಸಿದ್ಧರಿದ್ದೇವೆ ಎಂದರು.
ಜಿಲ್ಲಾ ಉಸ್ತುವಾರಿ ಮಂತ್ರಿಗಳ ನೇಮಕ ವಿಚಾರವಾಗಿ ಪ್ರತಿಕ್ರಿಯಿಸಿ, ಈಗ ಅನೇಕ ಜಿಲ್ಲೆಗಳಲ್ಲಿ ಉಸ್ತುವಾರಿ ಮಂತ್ರಿಗಳಿದ್ರೂ, ಇಲ್ಲದಂಗೆ ಇದ್ದಾರೆ. ಉಸ್ತುವಾರಿಗಳು ಏನೂ ಕೆಲಸ ಮಾಡ್ತಿಲ್ಲ. ಅವರವರ ಕ್ಷೇತ್ರಕ್ಕೆ ಸೀಮಿತವಾಗಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸಲ್ಲ. ಹೀಗಾಗಿ, ಆಡಳಿತ ಸುಧಾರಿಸುತ್ತಿಲ್ಲ ಎಂದರು.
ಇದಕ್ಕೂ ಮೊದಲು ಖಾಸಗಿ ಹೋಟೆಲ್ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಕ್ಷೇತ್ರದ ವಿವಿಧ ಪ್ರದೇಶಗಳಿಂದ ಆಗಮಿಸಿದ ಜನರು, ತಮ್ಮ ಸಮಸ್ಯೆಗಳನ್ನು ಬಗೆಹರಿಸಿ ಕೊಡುವಂತೆ ಮಾಜಿ ಸಿಎಂ ಬಳಿ ಮನವಿ ಮಾಡಿದರು. ಈ ವೇಳೆ ಸಿದ್ದರಾಮಯ್ಯನವರಿಗೆ ಹೂವಿನ ಹಾರ ಹಾಕಲು ಬಂದ ಅಭಿಮಾನಿಗಳಿಂದ ಹಾರ ತೆಗೆದುಕೊಂಡು ಮರಳಿ ಅವರಿಗೇ ಹಾಕಿ ಗಮನ ಸೆಳೆದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ನ ಹಲವು ಶಾಸಕರೇ ಬಿಜೆಪಿ ಸಂಪರ್ಕದಲ್ಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಹಾಡುತ್ತಾ, ಕುಣಿಯುತ್ತ ಮೆರವಣಿಗೆ ಮೂಲಕ ವೃದ್ಧನ ಅಂತ್ಯಕ್ರಿಯೆ
ತಂದೆಯನ್ನು ಮನೆಯಿಂದ ಹೊರಹಾಕಿದ ಪುತ್ರನಿಗೆ ತಕ್ಕಶಾಸ್ತಿ
ವಿಷಕಾರಿ ಹಾವನ್ನು ಕೊರಳಿಗೆ ಸುತ್ತಿ ಮುತ್ತಿಟ್ಟವನ ಸ್ಥಿತಿ ಚಿಂತಾಜನಕ
ರೈಲಿನಲ್ಲಿ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ 1.48 ಕೋಟಿ ರೂ. ನಗದು, ಚಿನ್ನಾಭರಣ ವಶ