ಬಿಜೆಪಿ ಜೊತೆ ಜೆಡಿಎಸ್ ವಿಲೀನ ವರದಿ ನಿಜವೇ?
ಬೆಂಗಳೂರು: ಬಿಜೆಪಿ ಜೊತೆಗೆ ಜೆಡಿಎಸ್ ವಿಲೀನವಾಗುತ್ತದೆ ಎಂಬ ಖಾಸಗಿ ವಾಹಿನಿಯ ವರದಿ ಸುಳ್ಳು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ಜೆಡಿಎಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗುವುದು ಮತ್ತು ಜೆಡಿಎಸ್ ಪಕ್ಷ ಬಿಜೆಪಿ ಜೊತೆಗೆ ವಿಲೀನವಾಗುತ್ತದೆ ಎಂಬ ವರದಿ ಸುಳ್ಳು ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಪರಿಷತ್ ಸಭಾಪತಿ ವಿಚಾರದಲ್ಲಿ ಮಾತ್ರ ನಮಗೆ ಸಹಕಾರ ನೀಡುತ್ತಿದ್ದಾರೆಯೇ ಹೊರತು ಬೇರೆ ಯಾವುದೇ ವಿಚಾರಗಳಿಲ್ಲ. ಗೋಹತ್ಯೆ ನಿಷೇಧದ ಬಗ್ಗೆ ನಮ್ಮ ಬೆಂಬಲವಿಲ್ಲ. ಸದ್ಯ ಕೇಳಿ ಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಕುಮಾಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಖಾಸಗಿ ಸುದ್ದಿವಾಹಿನಿಯೊಂದು ಜೆಡಿಎಸ್ ಪಕ್ಷವು ಬಿಜೆಪಿ ಜೊತೆಗೆ ವಿಲೀನವಾಗಲಿದೆ ಎಂದು ಸುದ್ದಿ ಬಿತ್ತರಿಸಿತ್ತು. ಇದರ ಪರಿಣಾಮ ಜೆಡಿಎಸ್ ಕಾರ್ಯಕರ್ತರು ಗೊಂದಲಕ್ಕೀಡಾಗಿದ್ದರು. ಈ ಬಗ್ಗೆ ಕುಮಾಸ್ವಾಮಿ ಅವರು ಸ್ಪಷ್ಟನೆ ನೀಡಬೇಕು ಎಂದು ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಕುಮಾರಸ್ವಾಮಿ ಈ ಸ್ಪಷ್ಟನೆ ನೀಡಿದ್ದಾರೆ.