ಬಿಜೆಪಿ ಕಾರ್ಯಕರ್ತನ ಕಿರುಕುಳದಿಂದ ಬೇಸತ್ತು ಬೆಂಕಿ ಹಚ್ಚಿಕೊಂಡು ತಾಯಿ ಮಗ ಆತ್ಮಹತ್ಯೆ - Mahanayaka

ಬಿಜೆಪಿ ಕಾರ್ಯಕರ್ತನ ಕಿರುಕುಳದಿಂದ ಬೇಸತ್ತು ಬೆಂಕಿ ಹಚ್ಚಿಕೊಂಡು ತಾಯಿ ಮಗ ಆತ್ಮಹತ್ಯೆ

stop suicide
07/12/2021

ಕೊಚ್ಚಿ: ಬಿಜೆಪಿ ಕಾರ್ಯಕರ್ತನ ಕಿರುಕುಳದಿಂದ ಬೇಸತ್ತು ತಾಯಿ ಹಾಗೂ ಮಗ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಎರ್ನಾಕುಲಂ ಜಿಲ್ಲೆಯ ವೈಪಿನ ದ್ವೀಪದ ನಯರಂಬಾಳಮ್ ನಲ್ಲಿ ನಡೆದಿದೆ.

42 ವರ್ಷದ ಸಿಂಧು ಹಾಗೂ ಅವರ 17 ವರ್ಷ ವಯಸ್ಸಿನ ಪುತ್ರ ಅತುಲ್ ಆತ್ಮಹತ್ಯೆಗೆ ಶರಣಾದವರಾಗಿದ್ದು, ಸಾವಿಗೂ ಮೊದಲು ಸಂತ್ರಸ್ತ ಮಹಿಳೆ ಸಿಂಧು, ಬಿಜೆಪಿ ಕಾರ್ಯಕರ್ತ ಪಿ.ಟಿ.ದಿಲೀಪ್ ನನ್ನ ಸಾವಿಗೆ ಕಾರಣ ಎಂದು ಹೇಳಿದ್ದು, ದಿಲೀಪ್ ನನ್ನನ್ನು ಚುಡಾಯಿಸುತ್ತಿದ್ದ. ಆತನ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ದಿಲೀಪ್ ತನಗೆ ಕಿರುಕುಳ ನೀಡುತ್ತಿರುವುದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಪೊಲೀಸರು ಜಾಮೀನು ಲಭ್ಯವಿರುವ ಪ್ರಕರಣವನ್ನು ದಿಲೀಪ್ ಮೇಲೆ ದಾಖಲಿಸಿ, ಠಾಣೆಯಲ್ಲಿಯೇ ಜಾಮೀನು ನೀಡಿ  ಕಳುಹಿಸಿದ್ದರು ಎನ್ನಲಾಗಿದೆ.

ಸಿಂಧು ಅವರ ನೆರೆಮನೆಯಲ್ಲಿ ವಾಸಿಸುತ್ತಿದ್ದ ಬಿಜೆಪಿ ಕಾರ್ಯಕರ್ತ ದಿಲೀಪ್, ಸಂತ್ರಸ್ತ ಮಹಿಳೆ ಸಿಂಧುಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಎಂದು ಸ್ಥಳೀಯರು ಕೂಡ ಆರೋಪಿಸಿದ್ದಾರೆ. ಈತನನ್ನು ಪ್ರಶ್ನಿಸಿದ್ದಕ್ಕೆ ಸಿಂಧು ಅವರ ಸಹೋದರ ಜೋಜೊನನ್ನು ಕೂಡ ಆತ ಥಳಿಸಿದ್ದ ಎಂದು ಸ್ಥಳೀಯರು ಹೇಳಿದ್ದಾರೆ.

ಸಿಂಧುವನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿರುತ್ತಿರುವ ಸಂದರ್ಭದಲ್ಲಿ ಆಕೆ ತನ್ನ ಸಾವಿಗೆ ದಿಲೀಪ್ ಕಾರಣ ಎಂದು ಹೇಳಿದ್ದಾರೆ.ಹೀಗಾಗಿ ಕುಟುಂಬಸ್ಥರು ಕೂಡ ಇನ್ನಷ್ಟು ಅನುಮಾನ ವ್ಯಕ್ತಪಡಿಸಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿದ್ದಾರೆ. ಜೊತೆಗೆ ಸಿಂಧು ಹೇಳಿಕೆಯ ಆಡಿಯೋವನ್ನು ಪೊಲೀಸರಿಗೆ ಸಲ್ಲಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಾವನ ಪಿಎಫ್ ಹಣಕ್ಕಾಗಿ ಪತ್ನಿಯನ್ನು ಕೊಂದೇ ಬಿಟ್ಟ!

ವಿಕೃತ ಘಟನೆ: ಗರ್ಭಿಣಿ ತಂಗಿಯ ಶಿರಚ್ಛೇದಿಸಿ ಸೆಲ್ಫಿ ತೆಗೆದುಕೊಂಡ ಸಹೋದರ!

‘ಬಿಜೆಪಿಯ ಭೀಷ್ಮ ‘ ಉರಿಮಜಲು ಕೆ.ರಾಮ ಭಟ್ ಇನ್ನಿಲ್ಲ

ಇಸ್ಲಾಂ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ

ಕಾಮೋದ್ರೇಕಕಾರಿ ಮದ್ದು ನೀಡಿ ಯುವಕನಿಂದ ಅತ್ಯಾಚಾರ: ಬಾಲಕಿ ಸಾವು

ಮಕ್ಕಳನ್ನು ಮನೆಯಲ್ಲಿಯೇ ಬಂಧಿಸಿದ ತಾಯಿ: ಮಕ್ಕಳ ಅಳು ಕೇಳಲಾರದೇ ಸ್ಥಳೀಯರಿಂದ ದೂರು

ಐವರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!

ಇತ್ತೀಚಿನ ಸುದ್ದಿ