18 ದಿನಗಳ ಕಣ್ಣಾಮುಚ್ಚಾಲೆ ಬಳಿಕ ಸಿಐಡಿಗೆ ಸಿಕ್ಕಿ ಬಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ
ಕಲಬುರಗಿ: 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 18 ದಿನಗಳಿಂದ ತಲೆಮರೆಸಿಕೊಂಡಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದು, ಪ್ರಕರಣ ಬೆಳಕಿಗೆ ಬಂದ ಬಳಿಕ ತಲೆಮರೆಸಿಕೊಂಡಿದ್ದ ದಿವ್ಯಾ ರಾಜ್ಯ ಗೃಹ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿದ್ದರು. ಇದೀಗ 18 ದಿನಗಳ ನಂತರ ಪೊಲೀಸರು ಈಕೆಯನ್ನು ಬಂಧಿಸಿದ್ದಾರೆ.
ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬರುತ್ತಿದ್ದಂತೆಯೇ ದಿವ್ಯಾ ಹಾಗರಗಿ ಎಸ್ಕೇಪ್ ಆಗಿದ್ದಳು. ಈಕೆಯ ಮನೆಗೆ ಸ್ವತಃ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಈ ಹಿಂದೆ ಭೇಟಿ ನೀಡಿದ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಸರ್ಕಾರಕ್ಕೆ ತೀವ್ರ ಮುಜುಗರ ತಂದಿತ್ತು. ಇನ್ನೊಂದೆಡೆಯಲ್ಲಿ ವಿಪಕ್ಷ ನಾಯಕರು ಗೃಹ ಸಚಿವರನ್ನು ವಿಚಾರಣೆಗೊಳಪಡಿಸಬೇಕು ಎಂದು ಒತ್ತಾಯಿಸಿದ್ದರು.
ವಿಪಕ್ಷಗಳ ತೀವ್ರ ಒತ್ತಡದ ನಡುವೆಯೇ ಪೊಲೀಸರ ಜೊತೆ ಕಣ್ಣಾಮುಚ್ಚಾಲೆಯಾಡುತ್ತಿದ್ದ ದಿವ್ಯಾ ಹಾಗರಗಿ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದು, ದಿನಕ್ಕೊಂದು ಸ್ಥಳಕ್ಕೆ ಶಿಫ್ಟ್ ಆಗುತ್ತಿದ್ದಳು ಎನ್ನಲಾಗಿದೆ. ಇದೀಗ ದಿವ್ಯಾ ಹಾಗರಗಿಯನ್ನು ಬಂಧಿಸುವಲ್ಲಿ ಸಿಐಡಿ ಅಧಿಕಾರಿಗಳು ಯಶಸ್ವಿಯಾಗಿದ್ದು, ಪಿಎಸ್ ಐ ಪ್ರಕರಣದ ತನಿಖೆಗೆ ಇದೀಗ ಮತ್ತಷ್ಟ ಬಲ ಬಂದಂತಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಂಗಳೂರು: ಹಾಡಹಗಲೇ ರೌಡಿಶೀಟರ್ ನ ಭೀಕರ ಹತ್ಯೆ
ಹೃದಯಾಘಾತಕ್ಕೂ ಮೊದಲು ಕಂಡು ಬರುವ ಮುನ್ಸೂಚನೆಗಳೇನು?
ಬೀದಿ ನಾಯಿಗಳ ದಾಳಿಗೆ ಮತ್ತೊಂದು ಮುಗ್ದ ಜೀವ ಬಲಿ
ಕೆಲಸ ಮುಗಿಸಿ ಬರುತ್ತಿದ್ದ ಯುವತಿಯ ಮೇಲೆ ಆಟೋ ಚಾಲಕ, ಆತನ ಸ್ನೇಹಿತನಿಂದ ಅತ್ಯಾಚಾರ