ದುರಂತ: ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ; ಡೆಡ್ ಬಾಡಿ ಹಿಂದೆ ಅನುಮಾನದ ಹುತ್ತ..! - Mahanayaka
12:03 AM Thursday 12 - December 2024

ದುರಂತ: ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ; ಡೆಡ್ ಬಾಡಿ ಹಿಂದೆ ಅನುಮಾನದ ಹುತ್ತ..!

09/11/2023

ಬಿಜೆಪಿ ಮುಖಂಡನ ಮೃತದೇಹವು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪಶ್ಚಿಮ ಬಂಗಾಳದ ಬಂಕೂರು ಜಿಲ್ಲೆಯಲ್ಲಿ ನಡೆದಿದೆ. ಹೆಣದ ಕೈ ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ. ಹೀಗಾಗಿ ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಶಂಕಿಸಲಾಗಿದೆ.

ಮೃತರನ್ನು ಸುಭೋದೀಪ್‌ ಮಿಶ್ರಾ ಅಲಿಯಾಸ್‌ ದೀಪು (26) ಎಂದು ಗುರುತಿಸಲಾಗಿದೆ. ನಿಧಿರಾಂಪುರ ಗ್ರಾಮದ ಶಾಲಾ ಆವರಣದಲ್ಲಿ ಈ ಮೃತದೇಹ ಪತ್ತೆಯಾಗಿದೆ. ಈ ಘಟನೆ ಬಳಿಕ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಒಂದೆಡೆ ಇದು ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಇದ್ದ ಹಿನ್ನೆಲೆಯಲ್ಲಿ ನಡೆದ ಕೊಲೆ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ ಇದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ಕೃತ್ಯ ಎಂದು ಆರೋಪ ವ್ಯಕ್ತವಾಗಿದೆ.

ದೀಪು ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದು, ಮಹಿಳೆಯ ಕುಟುಂಬಸ್ಥರು ಕೊಲೆ ಬೆದರಿಕೆ ಹಾಕಿದ್ದರು. ಹೀಗಾಗಿ ಅವರೇ ದೀಪುವನ್ನು ಹತ್ಯೆ ಮಾಡಿದ್ದಾರೆ ಎಂದು ಮನೆಯವರು ಆರೋಪಿಸಿದ್ದಾರೆ.

ಇನ್ನು ಬಿಜೆಪಿ ಮುಖಂಡನ ಹತ್ಯೆಗೆ ರಾಜಕೀಯ ಬಣ್ಣ ಕೊಡಲಾಗುತ್ತಿದ್ದು, ಟಿಎಂಸಿ ಗೂಂಡಾಗಳು ಸುಭೋದೀಪ್‌ ಮಿಶ್ರಾರನ್ನು ಹತ್ಯೆ ಮಾಡಿ ಕೈಗಳನ್ನು ಕಟ್ಟಿಹಾಕಿ ಮರಕ್ಕೆ ನೇಣು ಬಿಗಿದಿದ್ದಾರೆ. 2023ರ ಪಂಚಾಯತ್‌ ಚುನಾವಣೆಯಲ್ಲಿ ಆತ ಬಿಜೆಪಿ ಅಭ್ಯರ್ಥಿಯಾಗಿದ್ದು ಟಿಎಂಸಿ ಗೂಂಡಾಗಳು ಆತನ ಜನಪ್ರಿಯತೆ ಸಹಿಸಲಾಗದೇ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ.


ಇತ್ತೀಚಿನ ಸುದ್ದಿ