ಮಸೀದಿಯ ಹೊರಗೆ ಬಿಜೆಪಿ ಮುಖಂಡನ ಗುಂಡಿಟ್ಟು ಹತ್ಯೆ !
23/11/2020
ನವದೆಹಲಿ: ಮಸೀದಿಯ ಹೊರಗೆ ಸ್ಥಳೀಯ ಬಿಜೆಪಿ ಮುಖಂಡನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಈಶಾನ್ಯ ದೆಹಲಿಯಲ್ಲಿ ನಡೆದಿದ್ದು, ತಂದೆ ಹಾಗೂ ಮಗನ ಮೇಲೆ ಅಪರಿಚಿತ ವ್ಯಕ್ತಿಗಳು ದಾಳಿ ನಡೆಸಿದ್ದಾರೆ.
ನಂದ್ ನಗರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಸೀದಿಯ ಹೊರಗಡೆ ಈ ಘಟನೆ ನಡೆದಿದ್ದು, ಬಿಜೆಪಿ ಮುಖಂಡ ಹಾಗೂ ಆರ್ ಟಿಐ ಕಾರ್ಯಕರ್ತರೂ ಆಗಿರುವ ಜುಲ್ಫಿಕರ್ ಖುರೇಷಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದ್ದು, ಅವರ ಮಗನ ಮೇಲೆ ಚಾಕುವಿನಿಂದ ದಾಳಿ ನಡೆಸಲಾಗಿದೆ.
ಖುರೇಷಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆತನ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಆತನ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ಪ್ರಾರಂಭಿಸಿದ್ದಾರೆ.