ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಶಾಸಕರ ಸ್ಥಿತಿ ಗಂಭೀರ

cm udasi
28/05/2021

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಸಿ.ಎಂ. ಉದಾಸಿ ಅವರ ಆರೋಗ್ಯ ಸ್ಥಿತಿ ಗಂಭೀರ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ.

ಸದ್ಯ ಉದಾಸಿ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ.  ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

77 ವರ್ಷ ವಯಸ್ಸಿನ ಉದಾಸಿ ಅವರು ರಕ್ತ ಸಂಬಂಧಿತ ಕಾಯಿಲೆಯಿಂದ ಕಳೆದ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ, ಗೃಹ ಸಚಿವ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.

ಇತ್ತೀಚಿನ ಸುದ್ದಿ

Exit mobile version