ಕಾಂಗ್ರೆಸ್ ಮುಖಂಡರನ್ನು ಭೇಟಿಯಾದ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ: ಚರ್ಚೆಗೆ ಗ್ರಾಸವಾದ ಶಾಸಕರ ಭೇಟಿ

ಕೊಟ್ಟಿಗೆಹಾರ: ಕಾಂಗ್ರೆಸ್ ಮುಖಂಡ, ತಾ.ಪಂ. ಮಾಜಿ ಅಧ್ಯಕ್ಷ ವಿಜೇಂದ್ರಗೌಡ ಬಾಳೂರು ಅವರನ್ನು ಶಾಸಕ ಎಂ.ಪಿ.ಕುಮಾರಸ್ವಾಮಿ ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿರುವುದಕ್ಕೆ ವಿಶೇಷ ಮಹತ್ವ ಬಂದಿದ್ದು, ಈ ಬಗ್ಗೆ ಪತ್ರಿಕೆಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಎಂ.ಪಿ.ಕುಮಾರಸ್ವಾಮಿ, ಬಿಜೆಪಿ ಪಕ್ಷದಿಂದ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದೆ. ವಿಜೇಂದ್ರಗೌಡ ಅವರನ್ನು ಭೇಟಿಯಾಗಿರುವುದುರ ಹಿಂದೆ ಬೇರೆ ಯಾವುದೇ ಉದ್ದೇಶ ಇಲ್ಲ. ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಭೇಟಿ ಸಂದರ್ಭದಲ್ಲಿ ಮೌಲ್ಯಯುತ ರಾಜಕಾರಣ ಮತ್ತು ಹದಗೆಟ್ಟ ರಾಜಕೀಯ ವ್ಯವಸ್ಥೆ ಮತ್ತು ಇತ್ತೀಚೀನ ಬೆಳವಣಿಗೆಯ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw