ಅತ್ಯಾಚಾರಕ್ಕೊಳಗಾದ ಬಾಲಕಿಯ ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ ಶಾಸಕ!: ಕಾಂಗ್ರೆಸ್ ಕಿಡಿ - Mahanayaka

ಅತ್ಯಾಚಾರಕ್ಕೊಳಗಾದ ಬಾಲಕಿಯ ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ ಶಾಸಕ!: ಕಾಂಗ್ರೆಸ್ ಕಿಡಿ

hyderabad
05/06/2022

ಹೈದರಾಬಾದ್: ಹೈದರಾಬಾದ್‌ ನಲ್ಲಿ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ಚಿತ್ರಗಳನ್ನು ಬಿಡುಗಡೆ ಮಾಡಿದ ಬಿಜೆಪಿ ಶಾಸಕನ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.  ಬಿಜೆಪಿ ಶಾಸಕ ರಘುನಾಥ್ ರಾವ್ ಅವರು ಬಾಲಕಿ ಮತ್ತು ಅಪ್ರಾಪ್ತ ಆರೋಪಿಗಳ ಚಿತ್ರಗಳನ್ನು ಒಳಗೊಂಡ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

ಈ ಪ್ರಕರಣದಲ್ಲಿ ತೆಲಂಗಾಣದ ಆಡಳಿತಾರೂಢ ಟಿಆರ್‌ಎಸ್‌ನ ಹಿರಿಯ ನಾಯಕರೊಬ್ಬರ ಪುತ್ರನೂ ಭಾಗಿಯಾಗಿದ್ದಾನೆ. ಆದರೆ ಪೊಲೀಸರು ಆತನನ್ನು ರಕ್ಷಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಆರೋಪಿಸಿದ್ದರು.  ಆರೋಪಿಗಳಿಂದ ಕ್ಲೀನ್ ಚಿಟ್ ಸಿಕ್ಕಿದ್ದು, ಚಿತ್ರ ಬಿಡುಗಡೆ ಮಾಡಲು ಪ್ರೇರೇಪಿಸಿತು ಎಂದು ರಾವ್ ಹೇಳಿದ್ದಾರೆ.

ಪ್ರಕರಣದ ಆರೋಪಿಗಳಲ್ಲಿ ಒಬ್ಬರು ಎಐಎಂಐಎಂ ಎಲ್‌ ಎ ಅವರ ಪುತ್ರ ಎಂದು ಕಾಂಗ್ರೆಸ್ ಸಂಸದ ಮಾಣಿಕ್ಯಂ ಟ್ಯಾಗೋರ್ ಆರೋಪಿಸಿದ್ದಾರೆ.  ವೀಡಿಯೋ ಬಿಡುಗಡೆಯಾದ ನಂತರ ಬಾಲಕಿ ಮತ್ತು ಆಕೆಯ ಕುಟುಂಬದ ಭದ್ರತೆಗೆ ತೊಂದರೆಯಾಗಿದೆ.  ಬಿಜೆಪಿ ಮತ್ತು ಟಿಆರ್‌ಎಸ್-ಎಂಐಎಂ ಮೈತ್ರಿಯಿಂದಾಗಿ ಈ ವಿಡಿಯೋ ಬಿಡುಗಡೆಯಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೆಟ್ಟುನಿಂತ 12 ಚಕ್ರದ ಲಾರಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತನ ಹತ್ಯೆ ಪ್ರಕರಣದ ಆರೋಪಿ ಬರ್ಬರ ಹತ್ಯೆ!

ಸಾವಿನಲ್ಲೂ ಕರ್ತವ್ಯ ಪ್ರಜ್ಞೆ ಮೆರೆದ ಬಸ್ ಚಾಲಕ

ತಲವಾರಿನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ: ಮೂವರು ಅರೆಸ್ಟ್

ಇತ್ತೀಚಿನ ಸುದ್ದಿ