ಬಿಜೆಪಿ ಶಾಸಕರಿಗೆ ಬಂಪರ್ ಗಿಫ್ಟ್ ನೀಡಿದ ಸಿಎಂ ಯಡಿಯೂರಪ್ಪ - Mahanayaka
10:09 AM Wednesday 15 - January 2025

ಬಿಜೆಪಿ ಶಾಸಕರಿಗೆ ಬಂಪರ್ ಗಿಫ್ಟ್ ನೀಡಿದ ಸಿಎಂ ಯಡಿಯೂರಪ್ಪ

17/12/2020

ಬೆಂಗಳೂರು: ಕಳೆದ ಒಂದು ವರ್ಷದಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿದೆ. ಬಿಜೆಪಿ ಹೈಕಮಾಂಡ್  ಒಂದೆಡೆ ಸಚಿವ ಸಂಪುಟ ವಿಸ್ತರಣೆಗೆ ಒಪ್ಪಿಗೆ ನೀಡುತ್ತಿಲ್ಲ. ಇನ್ನೊಂದೆಡೆ ಸಿಎಂ ಯಡಿಯೂರಪ್ಪ ವಿರುದ್ಧ ಶಾಸಕರು ಅಸಮಾಧಾನಗೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ಸಿಎಂ ಯಡಿಯೂರಪ್ಪ ಬಿಜೆಪಿ ಶಾಸಕರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ.

ಬಿಜೆಪಿಯ 13 ಶಾಸಕರಿಗೆ ಸಂಪುಟ ದರ್ಜೆಯ ನಿಗಮ ಮಂಡಳಿ ಸ್ಥಾನ ಹಾಗೂ ನಾಲ್ವರಿಗೆ ರಾಜ್ಯ ದರ್ಜೆಯ ಸ್ಥಾನ ಮಾನ ನೀಡಿ ಅವರು ಆದೇಶ ನೀಡಿದ್ದಾರೆ. 13 ಶಾಸಕರನ್ನು ರಾಜ್ಯ ಆಡಳಿತ ಮಂಡಳಿಗಳು ಮತ್ತು ನಿಗಮಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಶ್ರೇಣಿಯು ಕ್ಯಾಬಿನೆಟ್ ಮಂತ್ರಿಯ ಸ್ಥಾನಕ್ಕೆ ಸಮನಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ನಡುವೆ 14ನೇ ನೇಮಕಾತಿಯಾಗಿ ಮಾಹಿತಿ ವಿಭಾಗದ ನಿವೃತ್ತ ಅಧಿಕಾರಿ ಎನ್.ಬೃಂಗೇಶ್ ಅವರನ್ನು ಸಿಎಂ ಅವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.


ADS

ಸಂಪುಟ ದರ್ಜೆಯ ಸ್ಥಾನಮಾನವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ-ಎಂ.ಚಂದ್ರಪ್ಪ, ಕರ್ನಾಟಕ ಆದಿ ಜೋಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ -ಐಹೊಳೆ ದುರ್ಯೋಧನ, ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಅಧ್ಯಕ್ಷ -ನೆಹರು ಓಲೇಕಾರ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ- ನರಸಿಂಹ ನಾಯಕ್ (ರಾಜು ಗೌಡ)

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷ-ಕೆ.ಶಿವನಗೌಡ ನಾಯಕ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ -ಕಳಕಪ್ಪ ಬಂಡಿ, ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷ – ಶಂಕರ ಪಾಟೀಲ್ ಮುನೇನಕೊಪ್ಪ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷ – ಕೆ. ಮಾಡಾಳು ವಿರೂಪಾಕ್ಷಪ್ಪ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ – ಸಿದ್ದು ಸವದಿ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಅಧ್ಯಕ್ಷ ದತ್ತಾತ್ರೇಯ ಸಿ.ಪಾಟೀಲ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ ಪಿ.ರಾಜೀವ್, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್.ವಿ.ರಾಮಚಂದ್ರ ಅವರು  ಪಡೆದುಕೊಂಡಿದ್ದಾರೆ.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕಲಬುರಗಿ) ಅಧ್ಯಕ್ಷ ರಾಜಕುಮಾರ್ ಪಾಟೀಲ್ ತೇಲ್ಕೂರ್, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್, ಕರ್ನಾಟಕ ರಾಜ್ಯ ಸಾಂಬಾರು ಅಭಿವೃದ್ಧಿ ಮಂಡಳಿ (ಹುಬ್ಬಳ್ಳಿ) ಅಧ್ಯಕ್ಷ -ಎ.ಎಸ್.ಜಯರಾಮ್, ಡಾ.ಬಾಬುಜಗ ಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಎನ್.ಲಿಂಗಣ್ಣ ಅವರು ರಾಜ್ಯ ಸಚಿವ ದರ್ಜೆಯ ಸ್ಥಾನಮಾನವನ್ನು ನೀಡಲಾಗಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ