ಕುಸ್ತಿಪಟುಗಳ ಹೋರಾಟಕ್ಕೆ ಬಿಜೆಪಿ ಸಂಸದೆ ಬೆಂಬಲ: ಬಿಜೆಪಿಗೆ ಇರಿಸುಮುರಿಸು
ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಭಾರೀ ಪ್ರತಿಭಟನೆಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಸಹಿತ ಬಿಜೆಪಿ ಪಕ್ಷದ ಮುಖಂಡರು ಮೌನ ವಹಿಸಿದ್ದಾರೆ.
ಈ ಮಧ್ಯೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಬಿಜೆಪಿಯ ಮಹಾರಾಷ್ಟ್ರ ಸಂಸದೆ ಪ್ರೀತಮ್ ಮುಂಡೆ ನೀಡಿರುವ ಹೇಳಿಕೆ ಬಿಜೆಪಿಗರಿಗೆ ಇರಿಸುಮುರಿಸನ್ನುಂಟು ಮಾಡಿದೆ.
ಹೌದು…! ಅವರು ಹೇಳಿಕೆ ನೀಡಿದ್ದು, ಯಾರೇ ಮಹಿಳೆ ನೀಡಿದ ದೂರಿನ ಬಗ್ಗೆಯೂ ಗಮನಹರಿಸಬೇಕು. ದೂರಿನ ಬಗ್ಗೆ ಗಮನ ಹರಿಸಿದ ನಂತರ ದೂರು ಸರಿಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಅಧಿಕಾರಿಗಳು ನಿರ್ಧರಿಸಬಹುದು ಎಂದು ಮುಂಡೆ ಹೇಳಿದ್ದಾರೆ. ಅದೇ ವೇಳೆ ಪ್ರಸ್ತುತ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
ನಾನು ಸಂಸತ್ತಿನ ಸದಸ್ಯಳಾಗಿ ಅಲ್ಲ. ಆದರೆ ಮಹಿಳೆಯಾಗಿ, ಯಾವುದೇ ಮಹಿಳೆಯಿಂದ ಅಂತಹ ದೂರು ಬಂದರೆ, ಅದನ್ನು ಸ್ವೀಕರಿಸಬೇಕು. ಅದನ್ನು ಪರಿಶೀಲಿಸಬೇಕು ಎಂದಿದ್ದಾರೆ. ಪರಿಶೀಲನೆಯ ನಂತರ, ಅಧಿಕಾರಿಗಳು ಇದು ಸರಿಯಾಗಿದೆಯೇ ಅಥವಾ ಅಸಮರ್ಪಕವಾಗಿದೆಯೇ ಎಂದು ನಿರ್ಧರಿಸಬೇಕು. ದೂರನ್ನು ಸ್ವೀಕರಿಸದೇ ಇದ್ದರೆ ಪ್ರಜಾಪ್ರಭುತ್ವದಲ್ಲಿ ಅದು ಸರಿಯಲ್ಲ ಎಂದಿದ್ದಾರೆ.
ಪ್ರೀತಮ್ ಮುಂಡೆ 2014 ರಲ್ಲಿ ಕಾರು ಅಪಘಾತದಲ್ಲಿ ನಿಧನರಾದ ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಗೋಪಿನಾಥ್ ಮುಂಡೆ ಅವರ ಪುತ್ರಿಯರಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw