ಬಿಜೆಪಿ ಮುಖಂಡ ಕೆ.ಅಣ್ಣಾಮಲೈಗೆ ಕೊರೊನಾ ಪಾಸಿಟಿವ್

anna malai
11/04/2021

ಚೆನ್ನೈ: ಬಿಜೆಪಿ ಮುಖಂಡ ಕೆ.ಅಣ್ಣಾಮಲೈ ಅವರಿಗೆ  ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಅವರು ತಮ್ಮ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿ ದೃಢಪಡಿಸಿದ್ದಾರೆ.

 ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಹಾಗೂ ನನ್ನ ಸುತ್ತಮುತ್ತಲಿನವರಿಗೆ ರೋಗದ ಲಕ್ಷಣಗಳು ಕಾಣಿಸಿಕೊಂಡರೆ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕರೂರು ಜಿಲ್ಲೆಯ ಅರವಕುರಿಚ್ಚಿ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು‌. ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಇತ್ತೀಚಿನ ಸುದ್ದಿ

Exit mobile version