ಬಿಜೆಪಿ ಮುಖಂಡನ ಮುಖಕ್ಕೆ ಮಸಿ ಬಳಿಯುವವರಿಗೆ 1 ಲಕ್ಷ ರೂ. | ಪ್ರತಿಭಾ ಕುಳಾಯಿ
08/02/2021
ಮಂಗಳೂರು: ಬಿಲ್ಲವರ ಮೂಲ ಪುರುಷರಾದ ಕೋಟಿ ಚೆನ್ನಯರ ವಿರುದ್ಧ ಹಾಗೂ ಜನಾರ್ದನ ಪೂಜಾರಿ ವಿರುದ್ಧ ಕೀಳಾಗಿ ಮಾತನಾಡಿರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ವಿರುದ್ಧ ಕಾಂಗ್ರೆಸ್ ನ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಗದೀಶ್ ಅವರು ಗರೋಡಿಗೆ ತೆರಳಿ ಜನಾರ್ಧನ ಪೂಜಾರಿಯವರ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕೆಂದು ಪ್ರತಿಭಾ ಒತ್ತಾಯಿಸಿದ್ದಾರೆ. ಅಲ್ಲದೇ ಜಗದೀಶ್ ಅಧಿಕಾರಿಯ ಮುಖಕ್ಕೆ ಮಸಿ ಬಳಿಯುವವರಿಗೆ ತಾನು 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಅವರು ಹೇಳಿದ್ದಾರೆ.
ಜನಗದೀಶ್ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿಡಿಯೋವನ್ನು ಪ್ರತಿಭಾ ಕುಲಾಯಿ ಫೇಸ್ ಬುಕ್ ನಲ್ಲಿ ಹಾಕಿದ್ದು ವಿಡಿಯೋ ವ್ಯಾಪಕ ವೈರಲ್ ಆಗಿದೆ.