ಬಿಜೆಪಿ ಮುಖಂಡನಿಂದ ದಲಿತ ಯುವಕನ ಹತ್ಯೆ: ಆರೋಪಿಯ ಬಂಧನಕ್ಕೆ ಸಿದ್ದರಾಮಯ್ಯ ಒತ್ತಾಯ - Mahanayaka
2:20 PM Thursday 12 - December 2024

ಬಿಜೆಪಿ ಮುಖಂಡನಿಂದ ದಲಿತ ಯುವಕನ ಹತ್ಯೆ: ಆರೋಪಿಯ ಬಂಧನಕ್ಕೆ ಸಿದ್ದರಾಮಯ್ಯ ಒತ್ತಾಯ

siddaramaiha
26/02/2022

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಹಾಗೂ ದಲಿತ ಸಮುದಾಯದ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿದ್ದು, ಆರೋಪಿಯನ್ನ ತಕ್ಷಣ ಬಂಧಿಸವಂತೆ ಒತ್ತಾಯಿಸಿದ್ದಾರೆ.

ಧರ್ಮಸ್ಥಳದ ಕನ್ಯಾಡಿ ನಿವಾಸಿ ದಿನೇಶ್ ಹತ್ಯೆಯಾದ ಯುವಕ. ಈತನನ್ನು ಕಿಟ್ಟು ಯಾನೆ ಕೃಷ್ಣ ಎಂಬಾತ ಹತ್ಯೆಗೈದಿದ್ದು, ಆರೋಪಿಯ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಬಿಜೆಪಿ ಮುಖಂಡನಾಗಿದ್ದು, ಆತನನ್ನು ಮುಂದಿನ 24 ಗಂಟೆಯೊಳಗೆ ಬಂಧಿಸದಿದ್ದರೆ ಪೊಲೀಸ್ ಠಾಣೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಫೆ. 23 ರ ಬೆಳಗ್ಗೆ 11 ಗಂಟೆ‌ ಸುಮಾರಿಗೆ ಆರೋಪಿ ಕಿಟ್ಟ ಯಾನೆ ಕೃಷ್ಣನ ಜಮೀನಿನ ದಾಖಲೆಗಳನ್ನು ತಾನು ಮಾಡಿಕೊಟ್ಟಿರುವುದಾಗಿ ಮೃತ ದಿನೇಶ್ ಸಾರ್ವಜನಿಕವಾಗಿ ಹೇಳಿದ್ದನು. ಇದರಿಂದ ಕೋಪಗೊಂಡ ಕೃಷ್ಣ, ದಿನೇಶ್​ ಮಾರನಾಂತಿಕವಾಗಿ ಹಲ್ಲೆ ಮಾಡಿದ್ದನು. ಹಲ್ಲೆಗೊಳಗಾದ ದಿನೇಶ್ ಆಸ್ಪತ್ರೆಗೆ ಹೋಗಲು ಹಣವಿಲ್ಲದೆ ಪರದಾಡುವಂತಾಗಿತ್ತು. ಫೆ.24 ರಂದು ಹಲ್ಲೆಗೊಳಗಾದ ದಿನೇಶ್ ಮನೆಯವರು, ಕೃಷ್ಣನ ಬಳಿ ಹೋಗಿ ಆತನಿಗೆ ಹೊಡೆದಿರುವ ನೀನೇ ಆಸ್ಪತ್ರೆಗೆ ದಾಖಲಿಸುವಂತೆ ತಾಕೀತು ಮಾಡಿದ್ದಾರೆ. ಇದಕ್ಕೆ ಸಮ್ಮತಿಸಿದ ಆರೋಪಿ, ಆತನನ್ನು ಮೆಟ್ಟಿಲಿನಿಂದ ಬಿದ್ದಿದ್ದಾನೆ ಎಂದು ಸುಳ್ಳು ಹೇಳಿ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾನೆ‌ ಎಂದು ಆರೋಪಿಸಲಾಗಿದೆ. ಒಳರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿನೇಶ್ ಶುಕ್ರವಾರ ಮೃತಪಟ್ಟಿದ್ದಾನೆ.

ಕೃಷ್ಣ ಮಾಡಿರುವ ಹಲ್ಲೆಯಿಂದಲೇ ದಿನೇಶ್​ ಮೃತಪಟ್ಟಿದ್ದಾನೆ ಎಂದು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೆ, ಆರೋಪಿ ಕೃಷ್ಣನು ದಿನೇಶ್ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಿಜೆಪಿ ಮುಖಂಡನಿಂದ ದಲಿತ ಯುವಕನ ಬರ್ಬರ ಹತ್ಯೆ: ಮೌನಕ್ಕೆ ಶರಣಾದ ದಲಿತ ಪರ, ಹಿಂದೂ ಪರ ಸಂಘಟನೆಗಳು

ನಟ ಚೇತನ್ ಅಹಿಂಸಾಗೆ ಷರತ್ತು ಬದ್ಧ ಜಾಮೀನು

ಪುಟಿನ್, ಮೋದಿ ಮಧ್ಯೆ ಉತ್ತಮ ಬಾಂಧವ್ಯ ಇದೆ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

ಪತಿ ಮಾಡಿದ ಸಾಲಕ್ಕೆ ಪತ್ನಿಯನ್ನು ಠಾಣೆಗೆ ಎಳೆದುತಂದ ಪೊಲೀಸರು: ಅವಮಾನ ತಾಳಲಾರದೆ ಪತ್ನಿ ಆತ್ಮಹತ್ಯೆ

 

ಇತ್ತೀಚಿನ ಸುದ್ದಿ