ಇಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಭೇಟಿ
ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು (ಏ. 18) ಸಾಯಂಕಾಲ 4:30 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಡೆನಿಸೆನ್ಸಿ ಹೋಟೆಲ್‍ಗೆ ತೆರಳುವರು. ಸಂಜೆ 5:30 ಕ್ಕೆ ಬಿವಿಬಿ ಕಾಲೇಜಿನ ಆಡಿಟೋರಿಯಂನಲ್ಲಿ ಪ್ರಬುದ್ಧರ ಜೊತೆ ಸಂವಾದದಲ್ಲಿ ಭಾಗವಹಿಸುವರು ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರು ತಿಳಿಸಿದ್ದಾರೆ.
ಸಂಜೆ 7 ಗಂಟೆಗೆ ಗೋಕುಲ ರಸ್ತೆಯ ಕ್ಯೂಬಿಕ್ಸ್ ಹೋಟೆಲಿನಲ್ಲಿ ಭಾರತೀಯ ಜನತಾ ಪಾರ್ಟಿ ಧಾರವಾಡ ವಿಭಾಗದ ಶಕ್ತಿಕೇಂದ್ರ, ಮಹಾಶಕ್ತಿಗಳ, ಜಿಲ್ಲಾ/ಮಂಡಲ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸುವರು.
ಏ.19 ರಂದು ಬೆಳಿಗ್ಗೆ 9.35 ಗಂಟೆಗೆ ಹುಬ್ಬಳ್ಳಿಯ ಶ್ರೀ ಸಿದ್ದಾರೂಢಮಠ ಮತ್ತು ಶ್ರೀ ಮೂರುಸಾವಿರಮಠಕ್ಕೆ ತೆರಳಿ ಪೂಜೆ ಸಲ್ಲಿಸುವರು. ನಂತರ ಹೆಲಿಕಾಪ್ಟರ್ ಮೂಲಕ ಹಾವೇರಿ ಜಿಲ್ಲೆಯ ಶಿಗ್ಗಾಂವಿಗೆ ತೆರಳಿ 12 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆ ಸಂಬಂಧ ತಾಲ್ಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 2:30ಕ್ಕೆ ಅವರು ಹುಬ್ಬಳ್ಳಿಯಿಂದ ದೆಹಲಿಗೆ ತೆರಳುವರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw