ಬಿಜೆಪಿ ನಾಯಕರೊಬ್ಬರ ಕಚೇರಿಯಲ್ಲಿ  ಮಹಿಳಾ ಕಾರ್ಯಕರ್ತೆಗೆ ಲೈಂಗಿಕ ಕಿರುಕುಳ! - Mahanayaka

ಬಿಜೆಪಿ ನಾಯಕರೊಬ್ಬರ ಕಚೇರಿಯಲ್ಲಿ  ಮಹಿಳಾ ಕಾರ್ಯಕರ್ತೆಗೆ ಲೈಂಗಿಕ ಕಿರುಕುಳ!

mumbai bjp
23/09/2021

ಮುಂಬೈ:  ಬಿಜೆಪಿ ನಾಯಕರೊಬ್ಬರ ಕಚೇರಿಯಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಮುಂಬೈನ ಮಹಿಳಾ ಬಿಜೆಪಿ ಕಾರ್ಯಕರ್ತೆಯೊಬ್ಬರು ಈ ಗಂಭೀರ ಆರೋಪವನ್ನು ಮಾಡಿದ್ದಾರೆ.

15ರಂದು ಬಿಜೆಪಿ ನಾಯಕರೊಬ್ಬರ ಕಾರ್ಯಾಲಯದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತನೋರ್ವ ಲೈಂಗಿಕವಾಗಿ ಶೋಷಣೆ ನಡೆಸಿದ್ದಾನೆ ಎಂದು ಕಾರ್ಯಕರ್ತೆ ಬುಧವಾರ ಬೋರಿವಿಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ದೂರಿನನ್ವಯ ಎಫ್ ಐ ಆರ್ ದಾಖಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ.

ಇನ್ನೂ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮುಂಬೈ ಮೇಯರ್ ಹಾಗೂ ಶಿವಸೇನಾ ನಾಯಕಿ ಕಿಶೋರಿ ಪೆಡ್ನೇಕರ್ ಅವರು ಸಂತ್ರಸ್ತೆ ಹಾಗೂ ಪೊಲೀಸ್ ಅಧಿಖಾರಿಗಳನ್ನು ಭೇಟಿಯಾಗಿ ಘಟನೆ ಸಂಬಂದ ವಿಚಾರಣೆ ನಡೆಸುವುದಾಗಿ ಹೇಳಿದ್ದಾರೆ.

ಸಂತ್ರಸ್ತ ಮಹಿಳೆ ತನ್ನ ಮೇಲೆ ಲೈಂಗಿಕ ಕಿರುಕುಳ ನಡೆದ ಬಗ್ಗೆ ಬಿಜೆಪಿ ಶಾಸಕರು ಹಾಗೂ ಬಿಜೆಪಿ ನಾಯಕರಿಗೆ ತಿಳಿಸಿ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಹಾಯವನ್ನು ಕೇಳಿದ್ದಳು. ಆದರೆ ಅವರು ಮಹಿಳೆಯನ್ನು ನಿರ್ಲಕ್ಷಿಸಿದ್ದಾರೆ ಎಂದು ಫೆಡ್ನೇಕರ್ ಅವರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on

ಇನ್ನಷ್ಟು ಸುದ್ದಿಗಳು…

ಹಾಲು ಬೇಕೆಂದು ಹಠ ಮಾಡುತ್ತಿದ್ದ ಮಗುವನ್ನು ನೆಲಕ್ಕೆ ಬಡಿದು ಹತ್ಯೆ ಮಾಡಿದ ತಾಯಿ!

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ: ಗ್ಯಾಸ್ ಸಿಲಿಂಡರ್ ಸಿಡಿದು ಮೂವರು ಸಾವು

ಪತ್ನಿಯ ಕುತ್ತಿಗೆಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ರಿಯಲ್ ಎಸ್ಟೇಟ್ ಉದ್ಯಮಿ!

ಮೊಬೈಲ್ ಚಾರ್ಜ್ ಇಡುವ ವೇಳೆ ವಿದ್ಯುತ್ ಶಾಕ್ ತಗಲಿ ಒಂದೇ ಕುಟುಂಬದ ಮೂವರ ದಾರುಣ ಸಾವು

ಗೆಳೆಯನ ಜೊತೆಗೆ ಗೋವಾ ಪ್ರವಾಸಕ್ಕೆ ತೆರಳಿದ್ದ ನಟಿ ಕಾರು ಅಪಘಾತದಲ್ಲಿ ದಾರುಣ ಸಾವು!

ಮೊಬೈಲ್ ಚಾರ್ಜ್ ಇಡುವ ವೇಳೆ ವಿದ್ಯುತ್ ಶಾಕ್ ತಗಲಿ ಒಂದೇ ಕುಟುಂಬದ ಮೂವರ ದಾರುಣ ಸಾವು

ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಮುತ್ತಿಟ್ಟವ ಈಗ ಪೊಲೀಸರ ವಶದಲ್ಲಿ: ಪೊಲೀಸರೆದು ಕಣ್ಣೀರಿಟ್ಟು ಆರೋಪಿ ಹೇಳಿದ್ದೇನು?

ಇತ್ತೀಚಿನ ಸುದ್ದಿ