ಬಿಜೆಪಿ ಪ್ರಚಾರದ ವಾಹನ ಡಿಕ್ಕಿ: ಬೈಕ್ ಸವಾರ ಸಾವು
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಶಾಸಕರ ನೇತೃತ್ವದ ಬಿಜೆಪಿ ಪ್ರಚಾರದ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕಲ್ಲಡ್ಕದ ನರಹರಿ ಸಮೀಪ ನಡೆದಿದೆ.
ಬೈಕ್ ಮತ್ತು ಬಿಜೆಪಿ ರ‍್ಯಾಲಿಯ ಪ್ರಚಾರದ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ಬೈಕ್ ಸವಾರನನ್ನು ವಿಜಿತ್ (35) ಎಂದು ಗುರುತಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಹಲವಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದು, ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೋಲಿಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw