11:08 AM Wednesday 12 - March 2025

ಬಿಜೆಪಿ ರಾಜ್ಯಾಧ್ಯಕ್ಷ ರೇಸ್ ನಲ್ಲಿ ಮೂವರ ಹೆಸರು | ಸಿಎಂ ಭೇಟಿಯಾದ ನಳಿನ್ ಕುಮಾರ್ ಕಟೀಲ್!

naleen kumar kateel
09/11/2021

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ಇಳಿಸಲು ತೆರೆಮರೆಯಲ್ಲಿ ಸಿದ್ಧತೆ ನಡೆದಿದ್ದು, ನಳಿನ್ ಕುಮಾರ್ ಕಟೀಲ್ ಬಳಿಕ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮೂವರ ಹೆಸರು ಸದ್ಯ ಕೇಳಿ ಬಂದಿದೆ. ಈ ಬೆಳವಣಿಗೆ ನಡುವೆ  ನಳಿನ್ ಕುಮಾರ್ ಕಟೀಲ್ ಸಿಎಂ ಬೊಮ್ಮಾಯಿ ನಿವಾಸದಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಸಿಎಂ ಖಾಸಗಿ ನಿವಾಸಕ್ಕೆ ಭೇಟಿ ನೀಡಿದ ನಳಿನ್ ಕುಮಾರ್ ಕಟೀಲ್, ಸುಮಾರು 40 ನಿಮಿಷಗಳ ಕಾಲ ಚರ್ಚೆ ನಡೆಸಿದರು. 2023ರ ಚುನಾವಣೆಯನ್ನು ಎದುರಿಸಲು ರಾಜ್ಯ ಬಿಜೆಪಿ ಹೊಸ ಸಾರಥಿಯ ಹುಡುಕಾಟದಲ್ಲಿ ತೊಡಗಿದೆ. ಈಗಾಗಲೇ ಮೂವರ ಹೆಸರು ಕೇಳಿ ಬಂದಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಂದಾಯ ಸಚಿವ ಆರ್.ಅಶೋಕ್, ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಈ ಮೂವರ ಹೆಸರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದಿದೆ ಎಂದು ಹೇಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version