ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಕಾಲೇಜು ಕಾಂಪೌಂಡ್ ಗೋಡೆ ಕುಸಿತ
ಲಕ್ನೋ: ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರು ಬಲಿಯಾ ಜಿಲ್ಲೆ ಬಿಜೆಪಿ ಸಮಾವೇಶ ನಡೆಯುತ್ತಿದ್ದ ಸ್ಥಳಕ್ಕೆ ಹೆಲಿಕಾಪ್ಟರ್ನಲ್ಲಿ ಆಗಮಿಸಿ ಇಲ್ಲಿನ ಪಿಯು ಕಾಲೇಜು ಮೈದಾನದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದಾಗ ಕಾಂಪೌಂಡ್ ಕುಸಿದಿರುವ ಘಟನೆ ನಡೆದಿದೆ.
ಹೆಲಿಕಾಪ್ಟರ್ ಲ್ಯಾಂಡಿಂಗ್ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದವರು ರಾಜ್ಯದಲ್ಲಿ ಶಿಕ್ಷಣದ ಮೂಲಭೂತ ಸೌಕರ್ಯಗಳನ್ನು ಪ್ರಶ್ನೆ ಮಾಡುತ್ತಿದ್ದಾರೆ. ಮತದಾರರನ್ನು ಒಲಿಸಿಕೊಳ್ಳಲು ಬಿಜೆಪಿ ತನ್ನ ಅಭಿವೃದ್ಧಿ ಕಾರ್ಯಗಳ ಮೇಲೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ. ಆದರೆ, ಹೆಲಿಕಾಪ್ಟರ್ ಲ್ಯಾಂಡಿಂಗ್‌ನಿಂದಾಗಿ ಕಾಲೇಜು ಕಾಂಪೌಂಡ್ ಗೋಡೆ ಕುಸಿದಿರುವುದು ಅವರ ಹೇಳಿಕೆಯ ಸತ್ಯಾಸತ್ಯತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಜಾಲತಾಣದಲ್ಲಿ ಕಾಮೆಂಟ್ ಮಾಡಿದ್ದಾರೆ.
ಬಲಿಯಾ ಜಿಲ್ಲೆಯ ಫೆಫ್ನಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ರಾಜ್ಯ ಸಚಿವ ಉಪೇಂದ್ರ ತಿವಾರಿ ಪರ ಪ್ರಚಾರ ನಡೆಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಆಗಮಿಸಿದ್ದರು. ರಾಟ್ಸರ್ ಪಿಯು ಕಾಲೇಜು ಮೈದಾನದಲ್ಲಿ ನಡ್ಡಾ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ಗಾಗಿ ಹೆಲಿಪ್ಯಾಡ್‌ನ್ನು ನಿರ್ಮಿಸಲಾಗಿತ್ತು.
ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುವ ವೇಳೆ ಅದರಿಂದ ಬರುತ್ತಿದ್ದ ಜೋರು ಗಾಳಿಗೆ ಕಾಲೇಜಿನ ಕಾಂಪೌಂಡ್ ಗೋಡೆಯೇ ಕುಸಿದಿದೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಂತ್ರಾಲಯಕ್ಕೆ ಹೊರಟಿದ್ದ ಕೆ ಎಸ್ ಆರ್ ಟಿಸಿ ಬಸ್ ನಲ್ಲಿ ಕುಸಿದುಬಿದ್ದು ಕಂಡಕ್ಟರ್ ಸಾವು
ಹತ್ಯೆಗೂ ಮೊದಲು ಹರ್ಷನಿಗೆ ಬಂದಿತ್ತೇ ವಿಡಿಯೋ ಕಾಲ್?
ಪ್ರೇಮ ವಿವಾಹವಾದ ನವದಂಪತಿ ಆತ್ಮಹತ್ಯೆಗೆ ಶರಣು
ತರಕಾರಿ ಸಾಗಿಸುವ ನೆಪದಲ್ಲಿ 65 ಕ್ವಿಂಟಾಲ್ ಅಕ್ರಮ ಅನ್ನಭಾಗ್ಯ ಅಕ್ಕಿ ಸಾಗಾಟ
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: 59 ಕ್ಷೇತ್ರಗಳಿಗೆ 4ನೇ ಹಂತದ ಮತದಾನ ಆರಂಭ