ಮಹಾರಾಷ್ಟ್ರದಲ್ಲಿ ಬಿಜೆಪಿ ಆಡಳಿತ ಔರಂಗಜೇಬನ ಕಾಲಕ್ಕಿಂತ ಕೆಟ್ಟದಾಗಿದೆ: ಸಂಜಯ್ ರಾವತ್ ಟೀಕೆ

ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಆಡಳಿತವು ಔರಂಗಜೇಬ್ ಆಡಳಿತಕ್ಕಿಂತ ಕೆಟ್ಟದಾಗಿದೆ ಎಂದು ಕರೆದ ಶಿವಸೇನೆ (ಯುಬಿಟಿ) ಮುಖಂಡ ಸಂಜಯ್ ರಾವತ್ ಟೀಕೆ ಮಾಡಿದ್ದಾರೆ. ಕೇಸರಿ ಪಕ್ಷದಿಂದಾಗಿ ರಾಜ್ಯದ ರೈತರು ಸಾಯುತ್ತಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ರೈತರು, ನಿರುದ್ಯೋಗಿಗಳು ಮತ್ತು ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. “ಔರಂಗಜೇಬನನ್ನು ಸಮಾಧಿ ಮಾಡಿ 400 ವರ್ಷಗಳಾಗಿವೆ. ಅವನನ್ನು ಮರೆತುಬಿಡಿ. ಔರಂಗಜೇಬ್ ನಿಂದಾಗಿ ಮಹಾರಾಷ್ಟ್ರದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆಯೇ? ನಿಮ್ಮಿಂದಾಗಿ ಅವರು ಇದನ್ನು ಮಾಡುತ್ತಿದ್ದಾರೆ” ಎಂದು ಅವರು ಹೇಳಿದರು. ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾವತ್, ಮೊಘಲ್ ದೊರೆ ದೌರ್ಜನ್ಯ ಎಸಗಿದ್ದರೆ, ಸರ್ಕಾರ ಏನು ಮಾಡುತ್ತಿದೆ? ಎಂದು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj