ಬಿಜೆಪಿ ಸಂಸದೆಯ ಕಣ್ಣಿಗೆ ವಿಷಕಾರಿ ಬಣ್ಣ ಎರಚಿದ ಟಿಎಂಸಿ ಕಾರ್ಯಕರ್ತರು!
28/03/2021
ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಶನಿವಾರ ನಡೆದಿದ್ದು, ಇದೇ ಸಂದರ್ಭದಲ್ಲಿ ವಿವಿಧೆಡೆಗಳಲ್ಲಿ ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ಗಲಭೆ ನಡೆದಿರುವುದು ಬೆಳಕಿಗೆ ಬಂದಿದೆ.
ಇನ್ನೂ ಬಿಜೆಪಿ ಸಂಸದೆ ಹಾಗೂ ಚುಚುರಾ ಕ್ಷೇತ್ರದ ಅಭ್ಯರ್ಥಿ ಲಾಕೆಟ್ ಚಟರ್ಜಿ ಮೇಲೆ ಟಿಎಂಸಿ ಕಾರ್ಯಕರ್ತರು ವಿಷಕಾರಿ ಬಣ್ಣ ಎರಚಿದ್ದಾರೆ ಎಂದು ಅವರು ಆರೋಪಿಸಿದ್ದು, ಶನಿವಾರ ಸಂಜೆ ರವೀಂದ್ರನಗರದ ಕಲಿತ್ಲ ಮೈದಾನದಲ್ಲಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಕೊಡಲಿಯಾ ನಂ.2 ಗ್ರಾಮ ಪಂಚಾಯತ್ ಬಳಿಯಲ್ಲಿ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ದಾಳಿಯಿಂದ ಸಂದದೆಯ ಕಣ್ಣು ಮತ್ತು ಕೆನ್ನೆಯ ಮೇಲೆ ತೀವ್ರವಾಗಿ ಬಣ್ಣ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ. ಟಿಎಂಸಿಗೆ ಸೋಲಿನ ಭಯ ಆರಂಭವಾಗಿದೆ. ಹಾಗಾಗಿ ಅವರು ಬೇರೆ ರೀತಿಯಲ್ಲಿ ನಮ್ಮನ್ನು ಸೋಲಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.