ಕೊಲ್ಲೂರು: ಮನೆಯಿಂದ ನಾಪತ್ತೆಯಾದ ಜಡ್ಕಲ್ ಯುವಕನ ಮೃತದೇಹ ಪತ್ತೆ - Mahanayaka

ಕೊಲ್ಲೂರು: ಮನೆಯಿಂದ ನಾಪತ್ತೆಯಾದ ಜಡ್ಕಲ್ ಯುವಕನ ಮೃತದೇಹ ಪತ್ತೆ

kolluru
30/07/2023

ಕೊಲ್ಲೂರು:  ಜು.22ರಂದು ತನ್ನ ವಾಸದ ಮನೆಯಾದ ಮಕ್ಕೆಯ ಕೊಳಕೆಹೊಳೆ ಎಂಬಲ್ಲಿ ಮನೆ ಮಂದಿಯೊಂದಿಗೆ ಊಟ ಮಾಡಿ ಮಲಗಿದ್ದು ಜು.23ರಂದು ಬೆಳಗ್ಗೆ ಮನೆಯಿಂದ ನಾಪತ್ತೆಯಾಗಿದ್ದ ಬೈಂದೂರು ತಾಲೂಕು ಜಡ್ಕಲ್ ಗ್ರಾಮದ ಮಕ್ಕೆ ಕೊಳಕೆಹೊಳೆ ನಿವಾಸಿ ಸುರೇಶ (28) ಮೃತದೇಹ ಶನಿವಾರ ಸಂಜೆ ವೇಳೆ ಪತ್ತೆಯಾಗಿದೆ.


Provided by

ಜಡ್ಕಲ್ ಗ್ರಾಮದ ಕಾನ್ಕಿ ಹಾಸ್ಕಲ್ ಪಾರೆ ಎಂಬಲ್ಲಿನ ತೋಟವೊಂದರ ನಡುವೆ ಹಾದುಹೋಗುವ ಹರಿಯುವ ಮೆಕ್ಕೆ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದೆ. ಸುರೇಶ್ ಮನೆಯಿಂದ ಬಹಿರ್ದಸೆಗೆ ಹೋದ ಸಂದರ್ಭ ಕಳೆದ ವಾರ ವಿಪರೀತ ಮಳೆಯಿದ್ದರಿಂದ ತುಂಬಿ ಹರಿಯುವ ಹೊಳೆಗೆ ಬಿದ್ದು ಕೊಚ್ಚಿಹೋಗಿ ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರೀಸುದಾರರಿಗೆ ಹಸ್ತಾಂತರಿಸಲಾಗಿದೆ ಎನ್ನಲಾಗಿದೆ. ಕೊಲ್ಲೂರು ಠಾಣೆ ಉಪನಿರಿಕ್ಷಕಿ ಜಯಶ್ರೀ, ಸುಧಾರಾಣಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ