ಕಾಂಗ್ರೆಸ್ಸಿನ ಅಪಪ್ರಚಾರಗಳಿಗೆ ಕಡಿವಾಣದ ಜೊತೆಗೆ ಅವಿಭಜಿತ ದ.ಕ. ಜಿಲ್ಲೆಯ ಎಲ್ಲಾ ಸ್ಥಾನದ ಗೆಲುವಿಗೆ ಶ್ರಮಿಸಿ: ಕುಯಿಲಾಡಿ
2014ರ ಚುನಾವಣೆಯನ್ನು ಅವಲೋಕಿಸಿದರೆ ಸಾಮಾಜಿಕ ಜಾಲತಾಣದ ಅಗತ್ಯತೆ ಮತ್ತು ಅನಿವಾರ್ಯತೆಯ ಮಹತ್ವ ತಿಳಿಯುತ್ತದೆ. ಇಂದು ಸಾಮಾಜಿಕ ಜಾಲತಾಣದ ಮೂಲಕ ಯಾವುದೇ ಕ್ಷಣದ ಘಟನೆಗಳನ್ನು ಗಮನಿಸಿ ಅದೇ ಕ್ಷಣಕ್ಕೆ ಸ್ಪಂದಿಸುವ ಪ್ರಕ್ರಿಯೆ ನಡೆಯುತ್ತಿವೆ. ಈ ನಿಟ್ಟಿನಲ್ಲಿ ಪಕ್ಷದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪ್ರಮುಖರು ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳ ಅಪಪ್ರಚಾರ ಹಾಗೂ ಸುಳ್ಳಿನ ಜಾಲವನ್ನು ಭೇದಿಸಿ ಕಡಿವಾಣ ಹಾಕುವ ಜೊತೆಗೆ ಸರಕಾರದ ಅಭಿವೃದ್ಧಿ ಕೆಲಸ ಕಾರ್ಯಗಳು ಹಾಗೂ ಜನಪರ ಯೋಜನೆಗಳನ್ನು ಪ್ರಚುರಪಡಿಸಿ ಅವಿಭಜಿತ ದ.ಕ. ಜಿಲ್ಲೆಯ ಎಲ್ಲ 13 ಸ್ಥಾನಗಳನ್ನು ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲಲು ಅತ್ಯಮೂಲ್ಯ ಕೊಡುಗೆ ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಮಂಗಳೂರು ವಿಭಾಗ ಮಟ್ಟದ ಮಾಧ್ಯಮ, ಸಾಮಾಜಿಕ ಜಾಲತಾಣ ಮತ್ತು ಮಾಹಿತಿ ತಂತ್ರಜ್ಞಾನ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ, ಸಾಮಾಜಿಕ ಜಾಲತಾಣದ ರಾಷ್ಟ್ರೀಯ ಸಂಯೋಜಕ ಪಂಕಜ್ ಶುಕ್ಲಾರವರನ್ನು ಶಾಲು ಹೊದೆಸಿ ಗೌರವಿಸಿ ಮಾತನಾಡಿದರು.
ಇಂದಿನ ರಾಜಕೀಯ ವಿದ್ಯಮಾನಗಳ ಸಹಿತ ದೇಶ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಚಟುವಟಿಕೆಗಳು ಹಾಗೂ ವಿವಿಧ ಯೋಜನೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಜನತೆಯ ನಡುವೆ ಪ್ರಚಲಿತಗೊಳಿಸಿ, ಮುಂದಿನ ವಿಧಾನಸಭಾ ಚುನಾವಣೆಗೆ ಬಿಜೆಪಿ ಪರ ಜನಾಭಿಪ್ರಾಯ ಮೂಡಿಸಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ಯಲು ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಕರೆ ನೀಡಿದರು.
ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ನಿಯುಕ್ತಿಗೊಂಡಿರುವ ಬಿಜೆಪಿ ಸಾಮಾಜಿಕ ಜಾಲತಾಣದ ರಾಷ್ಟ್ರೀಯ ಸಂಯೋಜಕ ಪಂಕಜ್ ಶುಕ್ಲಾರವರು ಸಾಮಾಜಿಕ ಜಾಲತಾಣದ ವಿವಿಧ ಆಯಾಮಗಳನ್ನು ವಿವರಿಸಿ, ವಿಸ್ತೃತ ಉಪಯುಕ್ತ ಮಾಹಿತಿಯ ಮೂಲಕ ಕಾರ್ಯಾಗಾರವನ್ನು ನಡೆಸಿಕೊಟ್ಟರು.
ಸಾಮಾಜಿಕ ಜಾಲತಾಣ ರಾಜ್ಯ ಸಹ ಸಂಚಾಲಕ ನರೇಂದ್ರ ಮೂರ್ತಿ ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ಸಮಯದ ಬದ್ಧತೆಯೊಂದಿಗೆ ವಿರೋಧ ಪಕ್ಷಗಳ ನಕಾರಾತ್ಮಕ ಸುದ್ಧಿಗಳಿಗೆ ತಕ್ಕ ಉತ್ತರ ನೀಡುವ ಜೊತೆಗೆ ಸರಕಾರದ ಸಕಾರಾತ್ಮಕ ವಿಚಾರಗಳ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಸಾಮಾಜಿಕ ಜಾಲತಾಣ ರಾಜ್ಯ ಸಮಿತಿ ಸದಸ್ಯ ಮಹೇಶ್ ಪೂಜಾರಿ ಕುಂದಾಪುರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಸುದೀಪ್ ಶೆಟ್ಟಿ ನಿಟ್ಟೆ, ದ.ಕ. ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಅಜಿತ್ ಕುಮಾರ್ ಉಲ್ಲಾಳ್, ಸಹ ಸಂಚಾಲಕ ದೀರೇಶ್ ಕೆ., ದ.ಕ. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್, ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ, ಸೂರಜ್ ಜೈನ್ ಮಾರ್ನಾಡ್, ದ.ಕ. ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಆರ್.ಸಿ. ನಾರಾಯಣ್, ಉಡುಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳಾದ ಅಭಿರಾಜ್ ಸುವರ್ಣ, ಪ್ರವೀಣ್ ಪೂಜಾರಿ, ಸತೀಶ್ ಪೂಜಾರಿ, ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ರಜನಿ ಹೆಬ್ಬಾರ್, ಅಶ್ವಿನಿ ಆರ್. ಶೆಟ್ಟಿ, ಪೂರ್ಣಿಮಾ ಶೆಟ್ಟಿ ಹಾಗೂ ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಮಾಹಿತಿ ತಂತ್ರಜ್ಞಾನ ವಿಭಾಗದ ಜಿಲ್ಲಾ, ಮೋರ್ಚಾ, ಮಂಡಲ ತಂಡಗಳ ಪ್ರಮುಖರು ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ವಂದಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw