ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌ ಅವರಿಗೆ ಕಾಣಿಸಿಕೊಂಡ ದಿಢೀರ್ ಎದೆ ನೋವು

arun singh
20/02/2023

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌ ಅವರಿಗೆ ದಿಢೀರ್ ಎದೆ ಹಾಗೂ ಭುಜನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿ ತಪಾಸಣೆ ನಡೆಸಿದ ಘಟನೆ ಮಂಗಳೂರಲ್ಲಿ ನಡೆಯಿತು.

ಉಡುಪಿಯಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಆಗಮಿಸಿದ ವೇಳೆ ದಿಢೀರ್ ಎದೆ ಮತ್ತು ಭುಜದಲ್ಲಿ ನೋವು ಕಾಣಿಸಿಕೊಂಡಿತ್ತು.ಕೂಡಲೇ ಅವರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ಆಸ್ಪತ್ರೆಯಲ್ಲಿ ಇಸಿಜಿ ಸಹಿತ ಮತ್ತಿತರ ಅಗತ್ಯ ಪರೀಕ್ಷೆಗಳನ್ನು ನಡೆಸಿದ್ದ ವೈದ್ಯರ ತಂಡ ಯಾವುದೇ ತೊಂದರೆ ಇಲ್ಲ. ಅದು ಗ್ಯಾಸ್ಟಿಕ್ ನಿಂದ ಉಂಟಾದ ಸಮಸ್ಯೆಯೆಂದು ತಿಳಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ಮುಗಿಸಿದ ಬಳಿಕ ವಾಹನದಲ್ಲಿ ರಸ್ತೆ ಮೂಲಕ ಅರುಣ್ ಸಿಂಗ್ ತೆರಳಿದರು.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version