ಸಚಿವ ಅಂಗಾರಗೆ ಕೈತಪ್ಪಿದ ಬಿಜೆಪಿ ಟಿಕೆಟ್: ಪುತ್ತೂರು, ಸುಳ್ಯದಲ್ಲಿ ಬಿಜೆಪಿ ನಾಯಕರಿಗೆ ಬಿಗ್ ಶಾಕ್! - Mahanayaka

ಸಚಿವ ಅಂಗಾರಗೆ ಕೈತಪ್ಪಿದ ಬಿಜೆಪಿ ಟಿಕೆಟ್: ಪುತ್ತೂರು, ಸುಳ್ಯದಲ್ಲಿ ಬಿಜೆಪಿ ನಾಯಕರಿಗೆ ಬಿಗ್ ಶಾಕ್!

bjp
11/04/2023

ಸುಳ್ಯ/ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಪುತ್ತೂರಿನಲ್ಲಿ  ಹಾಲಿ ಶಾಸಕ ಹಾಗೂ ಹಾಲಿ ಸಚಿವರಿಗೆ ಟಿಕೆಟ್ ಕೈತಪ್ಪಿದ್ದು, ಬಿಜೆಪಿ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ.


Provided by

ಸುಳ್ಯದ ಅಂಗಾರ ಎಂದೇ ಖ್ಯಾತಿ ಪಡೆದ ಬಂದರು ಸಚಿವ ಎಸ್.ಅಂಗಾರಗೆ ಟಿಕೆಟ್ ಕೈ ತಪ್ಪಿದ್ದು, ದಕ್ಷಿಣ ಕನ್ನಡದ ಪುತ್ತೂರು ಮತ್ತು ಸುಳ್ಯದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರಿಗೆ ದೊಡ್ಡ ಶಾಕ್ ಇದಾಗಿದೆ.

ಸುಳ್ಯ ಮತ್ತು ಪುತ್ತೂರಿನಲ್ಲಿ ಮಹಿಳಾ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದ್ದು, ಪುತ್ತೂರಿನಲ್ಲಿ ಆಶಾ ತಿಮ್ಮಪ್ಪ ಅವರಿಗೆ ಟಿಕೆಟ್ ನೀಡಿದ್ದರೆ, ಸುಳ್ಯದಲ್ಲಿ ಭಾಗೀರತಿ ಮುರುಳ್ಯ ಅವರಿಗೆ ಅವಕಾಶ ನೀಡಲಾಗಿದೆ.


Provided by

ಇನ್ನೂ,  ಬೆಳ್ತಂಗಡಿ ಕ್ಷೇತ್ರದಲ್ಲಿ ಹಾಲಿ ಶಾಸಕ ಹರೀಶ್‌ ಪೂಂಜಾ, ಮಂಗಳೂರು ಉತ್ತರದಿಂದ ಹಾಲಿ ಶಾಸಕ ವೈ ಭರತ್‌ ಶೆಟ್ಟಿ, ದಕ್ಷಿಣದಿಂದ ವೇದವ್ಯಾಸ್‌ ಕಾಮತ್‌, ಉಳ್ಳಾಲದಲ್ಲಿ ಹೊಸ ಮುಖ ಸತೀಶ್‌ ಕುಂಪಲಗೆ ಟಿಕೆಟ್ ನೀಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ