ಎಂ.ಪಿ.ಕುಮಾರಸ್ವಾಮಿಗೆ ಬಿಜೆಪಿ ಟಿಕೆಟ್ ನೀಡುವಂತೆ ಸಿ.ಟಿ.ರವಿ ಮನೆಯಲ್ಲಿ ಬೆಂಬಲಿಗರಿಂದ ಬಲ ಪ್ರದರ್ಶನ!
ಮೂಡಿಗೆರೆ: ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ನೀಡುವಂತೆ ಒತ್ತಾಯಿಸಿ ನೂರಾರು ಬಿಜೆಪಿ ಕಾರ್ಯಕರ್ತರು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ ಟಿ ರವಿ ಮನೆಯಲ್ಲಿ ಬಲ ಪ್ರದರ್ಶನ ನಡೆಸಿದರು.
ಎಂ.ಪಿ.ಕುಮಾರಸ್ವಾಮಿ ಫೋಟೋ ಹಿಡಿದು ನೂರಾರು ಬೆಂಬಲಿಗರು ಮೂಡಿಗೆರೆ ಎಂಪಿ ಕುಮಾರಸ್ವಾಮಿ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ಎಂ.ಪಿ.ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಬಾರದು ಎಂದು ವಿರೋಧಿ ಬಣ ಬಲಪ್ರದರ್ಶನ ನಡೆಸಿತ್ತು. ಇದೀಗ ಎಂ.ಪಿ.ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡುವಂತೆ ಅವರ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಬಲ ಪ್ರದರ್ಶನ ಮಾಡಿದ್ದಾರೆ.
ವಿಜಯ ಸಂಕಲ್ಪ ಯಾತ್ರೆ ಸಂದರ್ಭದಲ್ಲಿ ಎರಡು ಬಣಗಳು ಪರ ವಿರೋಧ ಘೋಷಣೆಗಳನ್ನು ಕೂಗಿದ್ದರು. ಇದರಿಂದಾಗಿ ಯಾತ್ರೆಯು ಗೊಂದಲದ ಗೂಡಾಗಿ ಮಾರ್ಪಟ್ಟಿತ್ತು. ಪಕ್ಷದ ನಾಯಕರು ಕೂಡ ಇದರಿಂದ ಮುಜುಗರಕ್ಕೀಡಾಗಿದ್ದ ಘಟನೆಯೂ ನಡೆದಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw