ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾದ ಮುಸ್ಲಿಂ ಯುವಕನ ಹತ್ಯೆ; ನಾಲ್ವರ ಬಂಧನ
ಉತ್ತರ ಪ್ರದೇಶದ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾದ ಬಾಬರ್ (20)ಮುಸ್ಲಿಂ ಯುವಕನ ಹತ್ಯೆ ಪ್ರಕರಣದಲ್ಲಿ ಪೋಲಿಸರು ನಾಲ್ವರನ್ನು ಬಂಧಿಸಲಾಗಿದೆ. ಇದೇ ವೇಳೆ ಬಾಬರ್ ಸಂಬಂಧಿಕರಿಗೂ ಪೊಲೀಸರು ಭದ್ರತೆ ಒದಗಿಸಿದ್ದಾರೆ.
ಬಿಜೆಪಿ ಗೆಲುವಿನ ಸಂಭ್ರಮಾಚರಣೆ ವೇಳೆ ಬಾಬರ್ ಅಲಿ ಮೇಲೆ ಹಲ್ಲೆ ನಡೆದಿತ್ತು, ಗಂಭೀರವಾಗಿ ಗಾಯಗೊಂಡಿದ್ದ ಬಾಬರ್ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 25ರಂದು ಮೃತಪಟ್ಟಿದ್ದಾನೆ . ಘಟನೆಯ ನಂತರ ಗೋರಖ್ ಪುರ ರೇಂಜ್ ಡಿಐಜಿ ಕುಶಿನಗರದಲ್ಲಿ ಮೊಕ್ಕಾಂ ಹೂಡಿದ್ದು,ರವೀಂದರ್ ಗೌರ್ ಅವರು ಪ್ರಕರಣದ ತನಿಖೆಯನ್ನು ವಹಿಸಿಕೊಂಡಿದ್ದಾರೆ .
ಆದರೆ, ಇದಕ್ಕೂ ಮುಂಚೆ ಜೀವ ಬೆದರಿಕೆಯ ಕುರಿತು ಮೃತ ಯುವಕ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಎ ಎನ್ ಐಗೆ ತಿಳಿಸಿದ್ದಾರೆ. ಘಟನೆಯ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಾಬರ್ ಸಾವಿಗೆ ಸಂತಾಪ ಸೂಚಿಸಿದ್ದು, ತನಿಖೆ ನ್ಯಾಯಯುತವಾಗಿ ನಡೆಯಬೇಕೆಂದು ಒತ್ತಾಯಿಸಿದ್ದಾರೆ .
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಬೆಂಕಿ: ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ
ಗೋಕಾಕ್ ಜನತೆಗೆ ಸಿಹಿ ಸುದ್ದಿ ನೀಡಿದ ರಮೇಶ್ ಜಾರಕಿಹೊಳಿ: ಉಚಿತ ಚಿತ್ರ ಪ್ರದರ್ಶನಕ್ಕೆ ಅವಕಾಶ
ಹುಮ್ನಾಬಾದ್ ಪೊಲೀಸರ ಕಾರ್ಯಾಚರಣೆ: ಐಪಿಎಲ್ ಬುಕ್ಕಿಯ ಬಂಧನ
ಇಂಧನ ಬೆಲೆ ಇಳಿಕೆ ಬಿಜೆಪಿಯ ಚುನಾವಣಾ ಕಾರ್ಯತಂತ್ರವಾಗಿತ್ತು: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆಗೆ ದುಷ್ಕರ್ಮಿಗಳ ದಾಳಿ: ಸಿಸಿಟಿವಿ, ಭದ್ರತಾ ಗೋಡೆ ಧ್ವಂಸ