ಬಿಜೆಪಿ ಕಚೇರಿಯಲ್ಲೇ ಕಾರ್ಯಕರ್ತ ಸಾವಿಗೆ ಶರಣು!

ಬೆಂಗಳೂರು: ಬಿಜೆಪಿ ಕಾರ್ಯಕರ್ತರೊಬ್ಬರು ಪಕ್ಷದ ಕಚೇರಿಯಲ್ಲೇ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ.
ಮಡಿಕೇರಿ ಮೂಲದ ಬಿಜೆಪಿ ಕಾರ್ಯಕರ್ತರ ವಿನಯ್ ಸೋಮಯ್ಯ(35) ಆತ್ಮಹತ್ಯೆಗೆ ಶರಣಾದ ಕಾರ್ಯಕರ್ತ ಎಂದು ತಿಳಿದು ಬಂದಿದೆ. ಸಾವಿಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ.
ತನ್ನ ವಿರುದ್ಧ ರಾಜಕೀಯ ಪ್ರೇರಿತ ಎಫ್ ಐಆರ್ ದಾಖಲಿಸಿರುವುದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದಾರೆ.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಾಪ್ ನಲ್ಲಿ ವಿನಯ್ ಸೋಮಯ್ಯ ಪೋಸ್ಟ್ ಮಾಡಿದ್ದರು. ಈ ಸಂಬಂಧ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಅವರನ್ನು ಪೊಲೀಸರು ಎರಡು ತಿಂಗಳ ಹಿಂದೆ ಬಂಧಿಸಿದ್ದರು. ಬಂಧನದ ಬಳಿಕ ನೊಂದಿದ್ದ ವಿನಯ್ ಇಂದು ಮುಂಜಾನೆ ಸಾವಿಗೆ ಶರಣಾಗಿದ್ದಾರೆ.
ವಿನಯ್ ಗೆ ಮದುವೆಯಾಗಿ ಮಗು ಇದೆ. ಕುಟುಂಬ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿತ್ತು. ಮ್ಯಾನ್ ಪವರ್ ಸಪ್ಲೈ ಕಂಪೆನಿಯಲ್ಲಿ ಆಪರೇಷನ್ ಮ್ಯಾನೇಜರ್ ಆಗಿ ವಿನಯ್ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: