ಬಿಜೆಪಿಗೆ ಈ ಪರಿಸ್ಥಿತಿ ಬರಬಾರದಿತ್ತು | ಡಿ.ಕೆ.ಶಿವಕುಮಾರ್ ವ್ಯಂಗ್ಯ
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಎರಡೂ ಕಡೆಯಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ಸ್ವಂತ ಬಲದ ಮೇಲೆ ನಂಬಿಕೆ ಇಲ್ಲ. ಈ ಕಾರಣಕ್ಕಾಗಿ ಬಿಜೆಪಿ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಹೊರಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲಿನ ಸುಳಿಯಲ್ಲಿದ್ದಾರೆ. ಈ ಕಾರಣದಿಂದ ಜೆಡಿಎಸ್ ಬೆಂಬಲ ಪಡೆಯಲು ಆ ಪಕ್ಷದ ನಾಯಕರು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಎಲ್ಲ ಸಂದರ್ಭದಲ್ಲೂ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದೆ. ಆದರೆ, ಜೆಡಿಎಸ್ ಜತೆ ವಿಷಯಾಧಾರಿತವಾಗಿ ಹೊಂದಾಣಿಕೆ ಮಾಡಿಕೊಂಡಿದೆ. ಕೆಲವೆಡೆ ವಿರೋಧವನ್ನೂ ಮಾಡಿದೆ. ಕೆಲವೇ ದಿನಗಳ ಹಿಂದೆ ಜೆಡಿಎಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ನಾಯಕರೇ ಈಗ ಮೈತ್ರಿಗಾಗಿ ಮುಂದೆ ಬಂದಿದ್ದಾರೆ. ಬಿಜೆಪಿಗೆ ಈ ಪರಿಸ್ಥಿತಿ ಬರಬಾರದಿತ್ತು ಎಂದು ಅವರು ವ್ಯಂಗ್ಯವಾಡಿದರು.
ಬಿಜೆಪಿಯೊಳಗೆ ಗೊಂದಲದ ವಾತಾವರಣವಿದೆ. .ಎಸ್. ಯಡಿಯೂರಪ್ಪ ಅವರು ಜೆಡಿಎಸ್ ಜತೆ ಮೈತ್ರಿಯ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತದ್ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಯಾವ ಜಿಲ್ಲೆಯಲ್ಲೂ ಬಿಜೆಪಿಯವರು ಜೆಡಿಎಸ್ ಗೆ ಮತ್ತು ಜೆಡಿಎಸ್‌ನವರು ಬಿಜೆಪಿಗೆ ಮತ ಚಲಾವಣೆ ಮಾಡುವ ಪರಿಸ್ಥಿತಿ ಇಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸಿದ್ದರಾಮಯ್ಯ ವಿರುದ್ಧ ಮೇಲ್ವರ್ಗದವರು ಕುದಿಯುತ್ತಿದ್ದಾರೆ: ಸಿ.ಟಿ.ರವಿ ಆಕ್ರೋಶ
ನಮಗೆ ಕಾಂಗ್ರೆಸ್ ನವರ ಪ್ರಮಾಣ ಪತ್ರ ಬೇಕಾಗಿಲ್ಲ | ಸಿಎಂ ಬಸವರಾಜ ಬೊಮ್ಮಾಯಿ
ನಮಗೆ ಕಾಂಗ್ರೆಸ್ ನವರ ಪ್ರಮಾಣ ಪತ್ರ ಬೇಕಾಗಿಲ್ಲ | ಸಿಎಂ ಬಸವರಾಜ ಬೊಮ್ಮಾಯಿ
ಪ್ರಾಯೋಗಿಕ ಪರೀಕ್ಷೆಯ ನೆಪ: 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ | ಮಾದಕ ದ್ರವ್ಯ ನೀಡಿ ಅತ್ಯಾಚಾರಕ್ಕೆ ಯತ್ನ
ಸತ್ಯದಪ್ಪೆ ಬೊಲ್ಲೆಯ ಬಯಕೆ/ ಸೀಮಂತ ಕಾರ್ಯಕ್ರಮ: ತುಳುನಾಡಿನ ಅವಳಿ ವೀರರು ಕಾನದ-ಕಟದರು | ಸಂಚಿಕೆ: 09
ಮದ್ಯಪ್ರಿಯರಿಗೆ ಶಾಕ್: ನಾಳೆಯಿಂದ 3 ದಿನಗಳ ಕಾಲ ಬಾರ್ ಬಂದ್!
ವಿಕೃತ ಘಟನೆ: ಗರ್ಭಿಣಿ ತಂಗಿಯ ಶಿರಚ್ಛೇದಿಸಿ ಸೆಲ್ಫಿ ತೆಗೆದುಕೊಂಡ ಸಹೋದರ!