ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ವಿರುದ್ಧ ಕದನಕ್ಕಿಳಿದ ಬಿಜೆಪಿ ಅಲ್ಪಸಂಖ್ಯಾತ ವಿಭಾಗದ ರಾಷ್ಟ್ರೀಯ ಅಧ್ಯಕ್ಷ!
ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ವಿರುದ್ಧ ಬಿಜೆಪಿ ಅಲ್ಪಸಂಖ್ಯಾತ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ರಂಗಕ್ಕಿಳಿದಿದ್ದಾರೆ. ಬೋರ್ಡ್ ಎಂಬ ಹೆಸರನ್ನು ಕಿತ್ತು ಹಾಕಬೇಕು, ಇಲ್ಲದಿದ್ದರೆ ಗೃಹ ಸಚಿವರಿಗೆ ತಾನು ಈ ಬಗ್ಗೆ ಪತ್ರ ಬರೆಯುವುದಾಗಿ ಜಮಾಲ್ ಸಿದ್ದೀಕಿ ಹೇಳಿದ್ದಾರೆ.
ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಸರಕಾರಿ ಸಂಸ್ಥೆಯಲ್ಲ, ಇದೊಂದು ಖಾಸಗಿ ಸಂಘಟನೆಯಾಗಿದೆ. ಆದ್ದರಿಂದ ತನ್ನ ಹೆಸರಿನಿಂದ ಅದು ಬೋರ್ಡ್ ಶಬ್ದವನ್ನು ಕಿತ್ತು ಹಾಕಬೇಕು ಎಂದು ಸಿದ್ದೀಕಿ ಬರೆದ ಪತ್ರದಲ್ಲಿ ಆಗ್ರಹಿಸಲಾಗಿದೆ. ಆದ್ದರಿಂದ ಸರಕಾರ ತಕ್ಷಣ ಮುಸ್ಲಿಂ ಪರ್ಸನಲ್ ಲಾ ಬೋರ್ಡನ್ನು ನಿಷೇಧಿಸಬೇಕು. ಒಂದು ವೇಳೆ ತಕ್ಷಣಕ್ಕೆ ನಿಷೇಧವನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದಾದರೆ ಅದರ ಹೆಸರನ್ನು ಬದಲಿಸಬೇಕು. ಲಾ ಬೋರ್ಡ್ ನ ನಿಲುವು ಭಾರತೀಯ ಮುಸ್ಲಿಮರ ವರ್ಚಸ್ಸನ್ನು ಹಾಳು ಮಾಡುತ್ತಿದೆ ಎಂದು ಸಿದ್ದೀಕಿ ಬರೆದಿದ್ದಾರೆ.
ಬೋರ್ಡ್ ನಿಂದ ಮುಸ್ಲಿಂ ಸಮುದಾಯಕ್ಕೆ ನಷ್ಟವಾಗಿದೆ. ಅದು ಶಬಾನೋ ಪ್ರಕರಣ ಮತ್ತು ವಕ್ಫ್ ತಿದ್ದುಪಡಿ ಮಸೂದೆಯ ಬಗ್ಗೆ ಸಮುದಾಯಕ್ಕೆ ಸುಳ್ಳು ಮಾಹಿತಿಯನ್ನು ನೀಡುತ್ತಿದೆ. ಆ ಮೂಲಕ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ತೊಡಕಾಗಿ ಪರಿಣಮಿಸಿದೆ ಎಂದು ಅವರು ಆರೋಪಿಸಿದ್ದಾರೆ.
ದೇಶದಲ್ಲಿ ಮುಸ್ಲಿಮರ ವೈಯಕ್ತಿಕ ಕಾನೂನುಗಳನ್ನು ರಕ್ಷಿಸುವ ಉದ್ದೇಶದಿಂದ 1973 ರಲ್ಲಿ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡನ್ನು ಸ್ಥಾಪಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj