ಬಿ.ಕೆ.ಹರಿಪ್ರಸಾದ್ ರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆಯುತ್ತಿದೆ: ಪ್ರಣವಾನಂದ ಸ್ವಾಮೀಜಿ - Mahanayaka

ಬಿ.ಕೆ.ಹರಿಪ್ರಸಾದ್ ರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆಯುತ್ತಿದೆ: ಪ್ರಣವಾನಂದ ಸ್ವಾಮೀಜಿ

pranavananda
03/07/2023

ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿದೆ ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಆರೋಪಿಸಿದ್ದಾರೆ.

ಅವರು ಬಂಟ್ವಾಳದ ಮೆಲ್ಕಾರ್‌ನ ಬಿರ್ವ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜನಾರ್ದನ ಪೂಜಾರಿಯವರನ್ನು ಮೂಲೆ ಗುಂಪು ಮಾಡಿದಂತೆ ಬಿ.ಕೆ.ಹರಿಪ್ರಸಾದ್ ಅವರನ್ನು ಕಡೆಗಣಿಸುತ್ತಿರುವುದು ಕಾಣುತ್ತಿದೆ. ಬಿ.ಕೆ. ಹರಿಪ್ರಸಾದ್ ಅವರಿಗೆ ತಕ್ಷಣ ಸೂಕ್ತ ಸ್ಥಾನಮಾನ ನೀಡಬೇಕು. ತಪ್ಪಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ತಕ್ಕ ಬೆಲೆ ತೆರಲಿದೆ ಎಂದು ಎಚ್ಚರಿಕೆ ನೀಡಿದರು.

ಬಿ.ಕೆ. ಹರಿಪ್ರಸಾದ್ ಅವರ ಬೆನ್ನೆಲುಬಾಗಿ ಬಿಲ್ಲವ ಸಮಾಜ ನಿಲ್ಲಲಿದೆ. ಅವರಿಗೆ ಸೂಕ್ತ ಸ್ಥಾನ ಮಾನ ನೀಡಿಬೇಕು. ಇಲ್ಲದೇ ಹೋದಲ್ಲಿ ಸಮುದಾಯ ಬೀದಿಗಿಳಿಯುವುದು ನಿಶ್ವಿತ ಎಂದರು. ಚುನಾವಣಾ ಪೂರ್ವ ನೀಡಿದ ಭರವಸೆಯಂತೆ ಬ್ರಹ್ಮಶ್ರೀ ನಾರಾಯಣ ಗುರು ನಿಗಮಕ್ಕೆ 250 ಕೋಟಿ ರೂಪಾಯಿ ಅನುದಾನ ಒದಗಿಸಬೇಕು.

ಅಧಕ್ಷ ಹಾಗೂ ಪದಾಧಿಕಾರಿಗಳ ನೇಮಕ ಮಾಡಬೇಕು, ವಿಧಾನಸೌಧದ ಮುಂಭಾಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿಯನ್ನು ಸ್ಥಾಪಿಸಬೇಕು. ಬಿಲ್ಲವರು ಹಾಗೂ ಈಡಿಗರ ಕುಲ ಕುಸಬಾಗಿರುವ ನೀರಾ ಹಾಗೂ ಶೇಂದಿ ಇಳಿಸುವ ಕಾಯಕಕ್ಕೆ ಸರಕಾರ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕು, ಬಿಲ್ಲವರ ಕುಲಶಾಸ್ತ್ರೀಯ ಅಧ್ಯಯನವನ್ನು ಮಂಗಳೂರು ವಿಶ್ವವಿದ್ಯಾನಿಲಯದ ನಾರಾಯಣ ಗುರು ಅಧ್ಯಯನ ಪೀಠಕ್ಕೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ:

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ