ಬಿ.ಕೆ.ಹರಿಪ್ರಸಾದ್ ರಿಗೆ ಶೀಘ್ರದಲ್ಲೇ ಸಚಿವ ಸ್ಥಾನ ನೀಡಬೇಕು: ಬಿಲ್ಲವ ಈಡಿಗ ಮಹಾಮಂಡಳಿ ಒತ್ತಾಯ

ಬಿಲ್ಲವ ಸಮಾಜದ ಹಿರಿಯ ನಾಯಕ, ಕಾಂಗ್ರೆಸ್ ರಾಷ್ಟ್ರೀಯ ಪಕ್ಷದಲ್ಲಿ ಗುರುತಿಸಿಕೊಂಡಿರುವ ಬಿ.ಕೆ.ಹರಿಪ್ರಸಾದ್ ರಿಗೆ ಶೀಘ್ರದಲ್ಲೇ ಸಚಿವ ಸ್ಥಾನ ನೀಡಬೇಕು ಎಂದು ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ಜಿಲ್ಲಾ ಸಮಿತಿಯ ರಾಜ್ಯ ಉಪಾಧ್ಯಕ್ಷ ಜಿತೇಂದ್ರ ಸುವರ್ಣ ಆಗ್ರಹಿಸಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬಿಲ್ಲವ, ಈಡಿಗ, ನಾಮದಾರಿ ಸಮುದಾಯ ಅವರ ಹಿಂದೆ ಇದೆ. ಕಾಂಗ್ರೆಸ್ ಪಕ್ಷ ಅವರನ್ನು ಕಡೆಗಣಿಸಿದೆ. ಪಕ್ಷ ಅವರನ್ನು ಕಡೆಗಣಿಸಬಾರದು. ಕಡೆಗಣಿಸಿದರೆ ನಾವು ಸುಮ್ಮನಿರಲ್ಲ. ರಾಷ್ಟ್ರ ಮಟ್ಟದಲ್ಲಿ ಬೆಳೆದ ಹರಿಪ್ರಸಾದ್‌ಗೆ ಅನ್ಯಾಯವಾದರೆ ಸಮಾಜ ಸಹಿಸಲ್ಲ. ಕಾಲ ಮಿಂಚಿಲ್ಲ. ಈಗಲಾದರೂ ಸೂಕ್ತ ಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಸಿದ್ಧರಾಮಯ್ಯ ಅವರು ಬ್ರಹ್ಮ್ರಶ್ರೀ ನಾರಾಯಣ ಗುರು ನಿಗಮಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಕೂಡಾ ನಾವು ಒತ್ತಾಯಿಸುತ್ತೇವೆ ಎಂದರು. ಸೆ. 9ರಂದು ಅತೀ ಹಿಂದುಳಿದ ವರ್ಗಗಳ ಸಮಾವೇಶವು ಬೆಂಗಳೂರಿನಲ್ಲಿ ನಡೆಯಲಿದೆ ಅಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw