ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಬೆನ್ನಲ್ಲೇ ಚಾಮರಾಜನಗರಕ್ಕೆ ಬಿ.ಎಲ್.ಸಂತೋಷ್ ಎಂಟ್ರಿ !

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ನಡೆದ ಬಳಿಕ ಚಾಮರಾಜನಗರಕ್ಕೆ ರಾಜಕೀಯ ಚಾಣಕ್ಯ ಬಿ.ಎಲ್.ಸಂತೋಷ್ ಎಂಟ್ರಿ ಕೊಟ್ಟು ಪಕ್ಷದ ಪ್ರಮುಖರ ಜೊತೆ ಸಭೆ ನಡೆಸುತ್ತಿದ್ದಾರೆ.
ಚಾಮರಾಜನಗರದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಮಾಧ್ಯಮದವರನ್ನು ಹೊರಗಿಟ್ಟು ಸಭೆ ನಡೆಸುತ್ತಿದ್ದಾರೆ. ಇದರಲ್ಲಿ, ಬಿಜೆಪಿ ಶಾಸಕರು, ಮಂಡಲ ಪ್ರಮುಖರು, ಪಕ್ಷದ ಇತರೆ ಪದಾಧಿಕಾರಿಗಳು ಭಾಗಿಯಾಗಿದ್ದಾರೆ.
ಹಳೇ ಮೈಸೂರು ಭಾಗ ಕಬ್ಜಕ್ಕೆ ಈಗಾಗ್ಲೇ ಬಿಜೆಪಿ ತಂತ್ರಗಾರಿಕೆ ರೂಪಿಸುತ್ತಿದ್ದು ಈ ಜಿಲ್ಲಾ ಬಿಜೆಪಿ ಪ್ರಮುಖರ ಸಭೆಯನ್ನು ನಡೆಸುತ್ತಿದ್ದಾರೆ.
ಮುಂದಿನ ಚುನಾವಣೆಗೆ ಸಜ್ಜುಗೊಳ್ಳುವ ಬಗ್ಗೆ ಜಿಲ್ಲಾ ಪ್ರಮುಖರಿಂದ ಮಾಹಿತಿ ಸಂಗ್ರಹಿಸುತ್ತಿದ್ದು ಪಕ್ಷ ಸಂಘಟನೆ ಬಗ್ಗೆ ಸಲಹೆ, ಸೂಚನೆಯನ್ನು ಸಂತೋಷ್ ಕೊಡುತ್ತಿದ್ದಾರೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw