ಶಾಕಿಂಗ್ ನ್ಯೂಸ್: ಬ್ಲೂಟೂತ್ ಹೆಡ್ ಫೋನ್ ಸ್ಫೋಟ ಯುವಕ ದಾರುಣ ಸಾವು
ಜೈಪುರ: ಬ್ಲೂಟೂತ್ ಹೆಡ್ ಫೋನ್ ಸ್ಫೋಟಗೊಂಡ ಪರಿಣಾಮ ಯುವಕನೋರ್ವ ಸಾವನ್ನಪ್ಪಿರುವ ದಾರುಣ ಘಟನೆ ರಾಜಸ್ಥಾನದ ಜೈಪುರ ಜಿಲ್ಲೆಯಲ್ಲಿ ನಡೆದಿದ್ದು, ಘಟನೆ ನಡೆದ ತಕ್ಷಣವೇ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ವೈರ್ ಲೆಸ್ ಹೆಡ್ ಫೋನ್ ಬಳಸಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಏಕಾಏಕಿ ಬ್ಲೂಟೂತ್ ಹೆಡ್ ಫೋನ್ ಬ್ಲಾಸ್ಟ್ ಆಗಿದ್ದು, ಸ್ಫೋಟದ ತೀವ್ರತೆಗೆ ಯುವಕ ಸ್ಥಳದಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಈ ವೇಳೆ, ಆತನಿಗೆ ಚಿಕಿತ್ಸೆ ನೀಡಲಾಯಿತಾದರೂ ಆತ ಹೃದಯಾಘಾತಗೊಂಡು ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.
ಉದೈಪುರಿ ನಿವಾಸಿ ರಾಕೇಶ್ ಮೃತ ಯುವಕ ಎಂದು ಗುರುತಿಸಲಾಗಿದ್ದು, ಬ್ಲೂಟೂತ್ ಹೆಡ್ ಫೋನ್ ಸ್ಫೋಟಗೊಂಡ ಪರಿಣಾಮ ಯುವಕನ ಎರಡೂ ಕಿವಿಗೂ ಗಂಭೀರವಾಗಿ ಏಟಾಗಿತ್ತು. ಡಾಕ್ಟರ್ ಎನ್.ಎನ್.ರುಂದ್ಲಾ ಅವರು ಚಿಕಿತ್ಸೆ ನೀಡುತ್ತಿದ್ದ ವೇಳೆಯೇ ರಾಕೇಶ್ ಹೃದಯಾಘಾತಗೊಂಡು ಮೃತಪಟ್ಟಿದ್ದಾನೆ.
ಬ್ಲೂಟೂತ್ ಹೆಡ್ ಫೋನ್ ಬ್ಲಾಸ್ಟ್ ಆಗಿ ಮೃತಪಟ್ಟಿರುವ ಘಟನೆ ಬಹುಶಃ ಇದು ಮೊದಲನೆಯ ಬಾರಿಗೆ ಇರಬಹುದು ಎಂದು ಹೇಳಲಾಗಿದೆ. ಹೊಸ ತಂತ್ರಜ್ಞಾನಗಳು ಕೆಲವೊಮ್ಮೆ ಭೀಕರವಾದ ಘಟನೆಗಳನ್ನೇ ಸೃಷ್ಟಿಸಿ ಬಿಡುತ್ತವೆ. ಬಹಳಷ್ಟು ಜನರು ಬ್ಲೂ ಟೂತ್ ಹೆಡ್ ಫೋನ್ ನ್ನು ಬಳಸುತ್ತಾರೆ. ಬೈಕ್ ಗಳಲ್ಲಿ ಸಂಚಾರಿಸುವಾಗ, ವಾಹನ ಪ್ರಯಾಣದ ನಡುವೆ, ಕಚೇರಿಗಳಲ್ಲಿಯೂ ಬಳಸುತ್ತಾರೆ. ಇದೊಂದು ನಂಬಿಕಸ್ಥ ಸಾಧನವಾಗಿತ್ತು. ಆದರೆ, ರಾಜಸ್ಥಾನದಲ್ಲಿ ನಡೆದ ಘಟನೆ ಬೆಚ್ಚಿಬೀಳಿಸಿದೆ.
ಇನ್ನಷ್ಟು ಸುದ್ದಿಗಳು…
ಶಾಕಿಂಗ್ ನ್ಯೂಸ್: ಬ್ಲೂಟೂತ್ ಹೆಡ್ ಫೋನ್ ಸ್ಫೋಟ ಯುವಕ ದಾರುಣ ಸಾವು
ಕಂಠಪೂರ್ತಿ ಕುಡಿದು ರಸ್ತೆಯ ಮಧ್ಯೆ ಯುವತಿ ಮಾಡಿದ ಕೆಲಸ ಏನು ಗೊತ್ತಾ? | ವಿಡಿಯೋ ವೈರಲ್
ಸಿಹಿ ಸುದ್ದಿ: ಭಾರತಕ್ಕೆ ಬರಲಿದೆ ಸಿಂಗಲ್ ಡೋಸ್ ಕೊವಿಡ್ ಲಸಿಕೆ
ವಿಡಿಯೋ ಕಾಲ್ ನಲ್ಲೇ ಕೊಲೆಗೆ ಟ್ರೈನಿಂಗ್ ನೀಡಿದ ಪ್ರಿಯಕರ: ಅಮ್ಮನನ್ನೇ ಕೊಂದ ಬಾಲಕಿ
ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ ಕಾಲೇಜು ಆರಂಭಕ್ಕೆ ತೀರ್ಮಾನ | ಸಿಎಂ ಹೇಳಿದ್ದೇನು?
403 ಕ್ಷೇತ್ರಗಳಲ್ಲಿಯೂ ASP ಸ್ಪರ್ಧೆ | ಮಾಯಾವತಿಗೆ ಅಸುರಕ್ಷಿತ ಭಾವನೆ ಇದೆ- ಚಂದ್ರಶೇಖರ್ ಆಜಾದ್
ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ | ದ.ಕ.ಸೇರಿದಂತೆ 8 ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ




























