ಬೈಕ್ ಗೆ ಡಿಕ್ಕಿ ಹೊಡೆದ ಬಿಎಂಟಿಸಿ ವೋಲ್ವೋ ಬಸ್: ಬೈಕ್ ಸವಾರ ಸಾವು - Mahanayaka

ಬೈಕ್ ಗೆ ಡಿಕ್ಕಿ ಹೊಡೆದ ಬಿಎಂಟಿಸಿ ವೋಲ್ವೋ ಬಸ್: ಬೈಕ್ ಸವಾರ ಸಾವು

bangalore news
06/01/2024

ಬೆಂಗಳೂರು:  ಬಿಎಂಟಿಸಿ ವೋಲ್ವೋ ಬಸ್ ವೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ದಾರುಣ ಘಟನೆ ಮಾರತಹಳ್ಳಿಯ ವರ್ತೂರು ಮುಖ್ಯರಸ್ತೆಯಲ್ಲಿ ನಡೆದಿದೆ.

ಎಳಂಗೋವನ್ ಸೆಂಕತ್ತವಲ್ (43) ಮೃತ ಬೈಕ್ ಸವಾರನಾಗಿದ್ದಾನೆ. ನಿನ್ನೆ ಬೆಳಗ್ಗೆ 9:30ರ ಸುಮಾರಿಗೆ ಬೈಕ್​ ನಲ್ಲಿ ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.

ಅಪಘಾತದ ವೇಳೆ ಬೈಕ್ ಸವಾರ ರಸ್ತೆಗೆ ಬಿದ್ದಿದ್ದು, ತಲೆ ಮತ್ತು ಮುಖಕ್ಕೆ ಗಂಭೀರವಾದ  ಗಾಯಗಳಾಗಿದ್ದವು.  ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರಾದರೂ, ಮಾರ್ಗ ಮಧ್ಯೆ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

ಘಟನೆ ಸಂಬಂಧ ಹೆಚ್ ಎಎಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ