ತುಂಗಾ ನದಿಯಲ್ಲಿ ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆ!

08/04/2025
ಚಿಕ್ಕಮಗಳೂರು: ತುಂಗಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾದ ಘಟನೆ ಕೊಪ್ಪ ತಾಲೂಕಿನ ನುಗ್ಗೆಮಕ್ಕಿ ಗ್ರಾಮದ ಬಳಿ ನಡೆದಿದೆ.
ಮನೋಜ್ ಮೃತಪಟ್ಟ ಯುವಕನಾಗಿದ್ದಾನೆ. ಭಾನುವಾರ ತುಂಗಾ ನದಿಯಲ್ಲಿ ತನ್ನ 6 ಜನ ಸ್ನೇಹಿತರೊಂದಿಗೆ ತೆರಳಿದ್ದ ಮನೋಜ್ ನೀರು ಪಾಲಾಗಿದ್ದ. 2 ದಿನಗಳಿಂದ ಮನೋಜ್ ನ ಮೃತದೇಹಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಶೋಧ ನಡೆಸಿದ್ದರು.
ಇದೀಗ ಹರಿಹರಪುರದ ಗುರುಕುಲ ಬಳಿ ಮನೋಜ್ ಮೃತದೇಹ ಪತ್ತೆಯಾಗಿದೆ. ಘಟನೆ ಸಂಬಂಧ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: