ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೊಲೆರೊ ವಾಹನ ಡಿಕ್ಕಿ: ಮೂವರು ವ್ಯಕ್ತಿಗಳು, 20 ಕುರಿಗಳ ಸಾವು - Mahanayaka

ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೊಲೆರೊ ವಾಹನ ಡಿಕ್ಕಿ: ಮೂವರು ವ್ಯಕ್ತಿಗಳು, 20 ಕುರಿಗಳ ಸಾವು

death 1
03/04/2024

ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಹಾಗೂ 20 ಕುರಿಗಳು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಬಳಿ ನಡೆದಿದೆ.

ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಗುಡ್ಡಪ್ಪ ಕೈದಾಳಿ(40), ಮೈಲಾರಪ್ಪ ಕೈದಾಳಿ(41), ಶಿವರಾಜ್ ಹೊಳೆಪ್ಪನವರ(22) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಬೆಳಗಾವಿಯಿಂದ ಕಾಕೋಳ ಗ್ರಾಮಕ್ಕೆ ಬರುವಾಗ ಮಾರ್ಗಮಧ್ಯೆ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಬೀರಪ್ಪ ದೊಡ್ಡಚಿಕ್ಕಣ್ಣನವರ, ನಿಂಗರಾಜ್ ಹಿತ್ತಲಮನಿ ಮತ್ತಯ ನಿಂಗಪ್ಪ ಕೊರಗುಂದ ಅವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ದಾವಣಗೆರೆ ಮತ್ತು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ