ಪಾಕಿಸ್ತಾನದಲ್ಲಿ ರಾಜಕೀಯ ಸಮಾವೇಶದಲ್ಲಿ ಬಾಂಬ್ ಸ್ಫೋಟ: 39 ಜನ ಸಾವು, ನೂರಾರು ಜನರಿಗೆ ಗಾಯ - Mahanayaka
9:56 AM Saturday 21 - September 2024

ಪಾಕಿಸ್ತಾನದಲ್ಲಿ ರಾಜಕೀಯ ಸಮಾವೇಶದಲ್ಲಿ ಬಾಂಬ್ ಸ್ಫೋಟ: 39 ಜನ ಸಾವು, ನೂರಾರು ಜನರಿಗೆ ಗಾಯ

pakistan
31/07/2023

ವಾಯುವ್ಯ ಪಾಕಿಸ್ತಾನದಲ್ಲಿ ಭಾನುವಾರ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 39 ಜನರು ಸಾವನ್ನಪ್ಪಿ ನೂರಾರು ಜನರು ಗಾಯಗೊಂಡ ಘಟನೆ ನಡೆದಿದೆ.

ಭಾನುವಾರ ಇಸ್ಲಾಮಿಕ್ ಪಕ್ಷದ ರಾಜಕೀಯ ಸಮಾವೇಶ ನಡೆಯುತ್ತಿತ್ತು. ಈ ವೇಳೆ ಜಮಿಯತ್ ಉಲೇಮಾ–ಎ–ಇಸ್ಲಾಂ-ಎಫ್(ಜೆಯುಐ–ಎಫ್) ಪಕ್ಷವನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಅಫ್ಘಾನಿಸ್ತಾನ ಗಡಿ ಸಮೀಪವಿರುವ ಖಾರ್ ಪಟ್ಟಣದಲ್ಲಿ ನಡೆದ ಈ ಸಮಾವೇಶದಲ್ಲಿ 400ಕ್ಕೂ ಹೆಚ್ಚು ಸದಸ್ಯರು ಮತ್ತು ಬೆಂಬಲಿಗರು ಭಾಗವಹಿಸಿದ್ದರು


Provided by

ಘಟನೆಯಲ್ಲಿ 123 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 17 ಜನ ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದಾರೆ. ಇದುವರೆಗೂ ಯಾವುದೇ ಉಗ್ರ ಸಂಘಟನೆ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ಆದರೆ ISIS ಸಂಘಟನೆ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿhttps://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿhttps://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿhttps://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ