ಅಸ್ಸಾಂನ ವಿವಿಧೆಡೆ ಬಾಂಬ್ ಪತ್ತೆ: ಶಂಕಿತ ಉಗ್ರ ಅರೆಸ್ಟ್ - Mahanayaka
10:31 PM Thursday 12 - December 2024

ಅಸ್ಸಾಂನ ವಿವಿಧೆಡೆ ಬಾಂಬ್ ಪತ್ತೆ: ಶಂಕಿತ ಉಗ್ರ ಅರೆಸ್ಟ್

26/09/2024

ಅಸ್ಸಾಂನ ಗುವಾಹಟಿಯಲ್ಲಿ ಐದು ಕಡೆ IED ಬಾಂಬ್ ಇಟ್ಟು ಬೆಂಗಳೂರಿಗೆ ಬಂದು ನೆಲೆಸಿದ್ದ ಆರೋಪಿತ ಶಂಕಿತ ಉಗ್ರ ಗಿರೀಶ್ ಬೋರಾ ಅಲಿಯಾಸ್ ಗೌತಮ್ ಎಂಬಾತನನ್ನು ನಿನ್ನೆ ಅಸ್ಸಾಂನ ಎನ್ಐಎ ಅಧಿಕಾರಿಗಳು ಬೆಂಗಳೂರಲ್ಲಿ ಬಂಧಿಸಿದ್ದಾರೆ.

ಬೆಂಗಳೂರು ನಗರ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನೆಲೆಸಿದ್ದ ಉಲ್ಫಾ ಸಂಘಟನೆಗೆ ಸೇರಿರುವ ಶಂಕಿತ ಉಗ್ರ ಗಿರೀಶ್ ಬೋರಾ ಅಲಿಯಾಸ್ ಗೌತಮ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಆಗಸ್ಟ್​ನಲ್ಲಿ ಗುವಾಹಟಿಯಲ್ಲಿಯೇ ಐದು IED ಬಾಂಬ್ ಇಟ್ಟು, ಕುಟುಂಬ ಸಮೇತ ಬೆಂಗಳೂರಿಗೆ ಬಂದು ವಾಸವಾಗಿದ್ದನು.

ಜಿಗಣಿಯ ಖಾಸಗಿ ಕಂಪನಿಯೊಂದರಲ್ಲಿ ಗೌತಮ್ ಎನ್ನುವ ಹೆಸರಲ್ಲಿ ಗಿರೀಶ್ ಬೋರಾ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದನು. ಗಿರೀಶ್ ಬೋರಾನ ಬಗ್ಗೆ ಪಕ್ಕಾ ಮಾಹಿತಿ ಕಲೆಹಾಕಿದ್ದು ಅಸ್ಸಾಂ ಎನ್ಐಎ ತಂದ ಇದೀಗ ಶಂಕಿತ ಉಗ್ರನನ್ನು ಬಂಧಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ