ದೆಹಲಿಯಲ್ಲಿನ ಕೆಲ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಮುಂದುವರಿಕೆ: ಪೊಲೀಸ್ ಅಲರ್ಟ್
ಆರ್.ಕೆ.ಪುರಂನ ದೆಹಲಿ ಪಬ್ಲಿಕ್ ಸ್ಕೂಲ್ (ಡಿಪಿಎಸ್) ನಲ್ಲಿ ಶನಿವಾರ ಮುಂಜಾನೆ ಬಾಂಬ್ ಬೆದರಿಕೆ ಹಾಕಿರೋದು ವರದಿಯಾಗಿದೆ. ಇದು ರಾಷ್ಟ್ರ ರಾಜಧಾನಿಯ ಶಾಲೆಗಳನ್ನು ಗುರಿಯಾಗಿಸಿಕೊಂಡು ನಡೆದ ಮೂರನೇ ಘಟನೆಯಾಗಿದೆ. “ಬೆಳಿಗ್ಗೆ 6:09 ಕ್ಕೆ ಡಿಪಿಎಸ್ ಆರ್ಕೆ ಪುರಂನಲ್ಲಿ ಬಾಂಬ್ ಬೆದರಿಕೆಯ ಬಗ್ಗೆ ನಮಗೆ ಕರೆ ಬಂದಿದೆ” ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಅಗ್ನಿಶಾಮಕ ಇಲಾಖೆ, ಸ್ಥಳೀಯ ಪೊಲೀಸರು, ಶ್ವಾನದಳ ಮತ್ತು ಬಾಂಬ್ ಪತ್ತೆ ತಂಡಗಳು ತಕ್ಷಣ ಶಾಲೆಗೆ ಆಗಮಿಸಿ ಸಂಪೂರ್ಣ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.
ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಇಲ್ಲಿಯವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ.
ಆದರೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಶೋಧ ಇನ್ನೂ ಮುಂದುವರೆದಿದೆ. ಈ ಬೆದರಿಕೆಗಳ ಪುನರಾವರ್ತಿತ ಘಟನೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj