ಬಾಂಗ್ಲಾದೇಶ: ಚಲಿಸುತ್ತಿದ್ದ ಹಡಗಿನಲ್ಲಿ ಬೆಂಕಿ; 32 ಮಂದಿ ಸಾವು
ಢಾಕಾ: ದಕ್ಷಿಣ ಬಾಂಗ್ಲಾದೇಶದಲ್ಲಿ ಸರಕು ಮತ್ತು ಪ್ರಯಾಣಿಕರನ್ನು ಸಾಗಿಸುತ್ತಿದ್ದ ದೋಣಿ ಬೆಂಕಿಗಾಹುತಿಯಾಗಿದ್ದು, ಸುಮಾರು 32 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ರಾಜಧಾನಿ ಢಾಕಾದಿಂದ 250 ಕಿ.ಮೀ. ದೂರವಿರುವ ದಕ್ಷಿಣ ಗ್ರಾಮ ಪಟ್ಟಣವಾದ ಜಲೋಕತಿ ಬಳಿ ಬೆಳಗ್ಗೆ ಈ ಘಟನೆ ಸಂಭವಿಸಿದೆ. ಹಡಗಿನಲ್ಲಿ ಸುಮಾರು 500 ಜನ ಪ್ರಯಾಣಿಕರು ಇದ್ದರು ಎನ್ನಲಾಗಿದೆ.
ಮೂರು ಮಹಡಿಯ ಹಡಗಿನಲ್ಲಿ ನದಿಯ ಮಧ್ಯಭಾಗದಲ್ಲಿ ಇದ್ದಾಗ ಬೆಂಕಿ ಹೊತ್ತಿಕೊಂಡಿತು. ಘಟನೆಯ ಬಳಿಕ ಪೊಲೀಸ್ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಈವರೆಗೆ 32 ಜನರ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಹೆಚ್ಚಿನವರು ಬೆಂಕಿಯಿಂದ ಗಂಭೀರ ಸುಟ್ಟಗಾಯಗಳಾಗಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥ ಮೊಯಿನುಲ್ ಇಸ್ಲಾಂ ತಿಳಿಸಿದ್ದಾರೆ.
ಬೆಂಕಿಯಿಂದ ಸುಟ್ಟ ಗಾಯಗಳಾಗಿರುವುದರಿಂದ 100 ಮಂದಿಯನ್ನು ಪಕ್ಕದಲ್ಲಿರುವ ಬರಿಸಲಾನ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕೆಎಸ್ಸಾರ್ಟಿಸಿ ಖಾಸಗೀಕರಣ ಮಾಡುವ ಪ್ರಸ್ತಾಪವಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಸ್ವಾಭಿಮಾನಕ್ಕೆ ಧಕ್ಕೆಯಾದ ಕಾರಣ ಬೌದ್ಧ ಧರ್ಮಕ್ಕೆ ಸೇರ್ಪಡೆ: ಶಾಸಕ ಎನ್.ಮಹೇಶ್
22 ವರ್ಷವಾಗದೆ ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಬಾರದು | ಶೋಭಾ ಕರಂದ್ಲಾಜೆ
ಫುಡ್ ಡೆಲಿವರಿ ವಿಳಂಬ: ಡೆಲಿವರಿ ಬಾಯ್ ಕುತ್ತಿಗೆ ಹಿಡಿದು ಹೊರದಬ್ಬಿದ ಮಹಿಳೆ