ಬೊಮ್ಮಾಯಿ ಸಂಪುಟದ 4 ಹಾಲಿ ಸಚಿವರಿಗೆ ಕೋಕ್ ನೀಡುವ ಸಾಧ್ಯತೆ | 8 ಶಾಸಕರಿಗೆ ಶೀಘ್ರವೇ ಸಚಿವ ಸ್ಥಾನ! - Mahanayaka
8:55 AM Tuesday 9 - September 2025

ಬೊಮ್ಮಾಯಿ ಸಂಪುಟದ 4 ಹಾಲಿ ಸಚಿವರಿಗೆ ಕೋಕ್ ನೀಡುವ ಸಾಧ್ಯತೆ | 8 ಶಾಸಕರಿಗೆ ಶೀಘ್ರವೇ ಸಚಿವ ಸ್ಥಾನ!

basavaraj bommai
12/10/2021

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ 100 ದಿನಗಳು ಪೂರೈಸುತ್ತಿರುವ ಸಂದರ್ಭದಲ್ಲಿ  ನಾಲ್ವರು ಹಾಲಿ ಸಚಿವರು ತಮ್ಮ ಖಾತೆ ಕಳೆದುಕೊಳ್ಳಲಿದ್ದಾರೆ. ಹಾಗೆಯೇ 8 ಶಾಸಕರಿಗೆ  ಸಚಿವಸ್ಥಾನದ ಯೋಗ ಕೂಡಿ ಬರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.


Provided by

ಉಪ ಚುನಾವಣೆ ಮುಗಿಯುತ್ತಿದ್ದಂತೆಯೇ 8 ಸಚಿವ ಸ್ಥಾನ ಭರ್ತಿಗೆ ತೀರ್ಮಾನಿಸಲಾಗಿದೆ ಎಂದು ಹೇಳಲಾಗುತ್ತಿದೆ. 4 ಮಂದಿ ಹಾಲಿ ಸಚಿವರಿಗೆ ಕೋಕ್ ನೀಡುವ ಸಾಧ್ಯತೆಗಳು ಕೂಡ ಕಂಡು ಬಂದಿದೆ. ಸಚಿವ ಸಂಪುಟಕ್ಕೆ ಚುರುಕು ಮುಟ್ಟಿಸಲು ಹೈಕಮಾಂಡ್ ನಿಂದಲೂ ಸಂದೇಶ ಬಂದಿದೆ ಎಂದು ಹೇಳಲಾಗಿದೆ.

ಬೊಮ್ಮಾಯಿ ಮುಖ್ಯಮಂತ್ರಿಯಾಗಿ 100 ದಿನಗಳಾಗುವ ಹೊತ್ತಿನಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ. ಈ ಸಂಪುಟ ವಿಸ್ತರಣೆಯ ಮುಖ್ಯ ಉದ್ದೇಶ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯಾಗಿದೆ ಎಂದು ತಿಳಿದು ಬಂದಿದೆ.

ಇನ್ನೂ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿರುವ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರಿಗೂ  ಸಚಿವ ಸ್ಥಾನ ದೊರಕುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ತುಳುನಾಡಿನ ಅಪ್ರತಿಮ ಅವಳಿ ವೀರರು ಕಾನದ-ಕಟದರು | ಸಂಚಿಕೆ-01

ಅವಿದ್ಯಾವಂತರು ದೇಶಕ್ಕೆ ಹೊರೆ, ಅವರು ಉತ್ತಮ ನಾಗರಿಕನಾಗಲು ಹೇಗೆ ಸಾಧ್ಯ? | ಅಮಿತ್ ಶಾ

500ಕ್ಕೂ ಅಧಿಕ ಚಿತ್ರದಲ್ಲಿ ನಟಿಸಿದ್ದ ಹಿರಿಯ ನಟ ನೆಡುಮುಡಿ ವೇಣು ನಿಧನ

ಪತ್ನಿಗೆ ಹಾವಿನಿಂದ ಕಚ್ಚಿಸಿ ಹತ್ಯೆ: ಪತಿ ದೋಷಿ ಎಂದು ತೀರ್ಪು ನೀಡಿದ ಕೋರ್ಟ್

ಕೆರೆಗೆ ಹಾರಿ ಯುವತಿ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಕೆಲವರ ಹೆಸರು ಉಲ್ಲೇಖ

ರಾಜಕೀಯ ಅಂದ್ರೆ, ಜನರ ಮೇಲೆ ಫಾರ್ಚುನರ್‌ ಕಾರು ಹರಿಸುವುದಲ್ಲ | ತನ್ನ ಪಕ್ಷದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡ!

ಯುವತಿ ಮೇಲೆ ಶಿಕ್ಷಕನಿಂದ ಪದೇ ಪದೇ ಅತ್ಯಾಚಾರ: ಗರ್ಭಪಾತಕ್ಕೆ ಒತ್ತಡ

ಇತ್ತೀಚಿನ ಸುದ್ದಿ